Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಜೆಡಿಎಸ್ ಅಭ್ಯರ್ಥಿ ನಾಮಪತ್ರ ಹಿಂಪಡೆದ ಪ್ರಕರಣ -ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ದಾಖಲು
    ಇತ್ತೀಚಿನ ಸುದ್ದಿ

    ಉಳ್ಳಾಲ: ಜೆಡಿಎಸ್ ಅಭ್ಯರ್ಥಿ ನಾಮಪತ್ರ ಹಿಂಪಡೆದ ಪ್ರಕರಣ -ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ದಾಖಲು

    April 27, 2023
    Share

    ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕುಂಪಲ ಎಂಬವರನ್ನು ಜೀವ ಬೆದರಿಕೆಯೊಡ್ಡಿ ನಾಮಪತ್ರ ವಾಪಸ್ ಪಡೆದಿರುವ ಘಟನೆಗೆ ಸಂಬಂಧಿಸಿ ಕಾಂಗ್ರೆಸ್ ಬೆಂಬಲಿತ ಮಾಜಿ ಕೌನ್ಸಿಲರುಗಳಿಬ್ಬರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲ ಪುರಸಭೆಯ ಕಾಂಗ್ರೆಸ್ ಬೆಂಬಲಿತ ಮಾಜಿ ಕೌನ್ಸಿಲರುಗಳಾದ ಮುಸ್ತಾಫ ಯಾನೆ ಖಬುರು ಮುಸ್ತಾಫ, ಉಸ್ಮಾನ್ ಕಲ್ಲಾಪು , ರಿಯಾಝ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಎ.21 ರಂದು ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಧಿಕೃತ ಅಭ್ಯರ್ಥಿಯಾಗಿ ಎ ಮತ್ತು ಬಿ ಫಾರಂ ಪಡೆದು ಉಳ್ಳಾಲ ನಗರಸಭೆ ಚುನಾವಣಾ ಕಚೇರಿಯಲ್ಲಿ ಅಲ್ತಾಫ್ ಕುಂಪಲ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಪರಿಶೀಲನೆಯಲ್ಲಿ ಸಿಂಧುತ್ವಗೊಂಡ ಘೋಷಣೆ ನಂತರ ಅದೇ ದಿನ ಸಂಜೆ 3 ಗಂಟೆಗೆ ಮೇಲಂಗಡಿ ದರ್ಗಾ ಹಿಂಭಾಗದಲ್ಲಿ ಮುಸ್ತಾಫ, ಉಸ್ಮಾನ್, ರಿಯಾಝ್ ಹಾಗೂ ಇತರರು ಸೇರಿ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಅವರನ್ನು ಬೆದರಿಕೆ ಹಾಕಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ, ಬೆದರಿಕೆ ಒಡ್ಡಿ, ಉಮೇದ್ವಾರಿಕೆ ವಾಪಸ್ಸು ಪಡೆಯುವ ಪತ್ರಕ್ಕೆ ಸಹಿಯನ್ನು ಬಲವಂತವಾಗಿ ಪಡೆದುಕೊಂಡಿದ್ದಾರೆ. ಬಳಿಕ ಅಲ್ಲಿಂದ ಎಳೆದು ತಂದು ಚುನಾವಣಾಧಿಕಾರಿಗಳಿಗೆ ಉಮೇದ್ವಾರಿಕೆ ವಾಪಸ್ಸು ತೆಗೆದುಕೊಳ್ಳುವ ಪತ್ರವನ್ನು ಸಲ್ಲಿಸುವಂತೆ ಮಾಡಿದ್ದಾರೆ. ಘಟನೆ ನಂತರ ಮತ್ತೆ ತಡರಾತ್ರಿ ಮನೆಗೆ ನುಗ್ಗಿ ಬೆದರಿಕೆಯೊಡ್ಡಿದ್ದಾರೆಂದು ದೂರಲಾಗಿದ್ದು, ಉಮೇದ್ವಾರಿಕೆ ಹಿಂಪಡೆಯುವ ಸಂದರ್ಭ ಅಭ್ಯರ್ಥಿ ಅಲ್ತಾಫ್ ಪರ ಅನುಮೋದಕರಿಗೆ ಹಾಗೂ ಬೆಂಬಲಿಗರೊಂದಿಗೆ ಚರ್ಚಿಸಲು ಅವಕಾಶ ನೀಡದಂತೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 251

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.