Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: 2020ರ ಗಾಂಜಾ ಪ್ರಕರಣಕ್ಕೆ ತೀರ್ಪು- ಆರೋಪಿಗೆ ಜೈಲು ಹಾಗೂ ದಂಡ
    ಇತ್ತೀಚಿನ ಸುದ್ದಿ

    ಬಂಟ್ವಾಳ: 2020ರ ಗಾಂಜಾ ಪ್ರಕರಣಕ್ಕೆ ತೀರ್ಪು- ಆರೋಪಿಗೆ ಜೈಲು ಹಾಗೂ ದಂಡ

    April 5, 2026
    Share

    ಬಂಟ್ವಾಳ: 2020ರಲ್ಲಿ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 7 ವರ್ಷಗಳ ಶಿಕ್ಷೆ ಹಾಗೂ ₹70,000 ದಂಡ ವಿಧಿಸಿ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

    ದಿನಾಂಕ 10-11-2020 ರಂದು ಮೇಲ್ಕಾರ್ ಬಸ್ ನಿಲ್ದಾಣದ ಬಳಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ, ಆಗಿನ ಬಂಟ್ವಾಳ ನಗರ ಠಾಣೆಯ ಪೊಲೀಸ್ ನಿರೀಕ್ಷಕರಾದ ಚೆಲುವರಾಜ್ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ, ₹49,000 ಮೌಲ್ಯದ 1.480 ಕೆ.ಜಿ ಗಾಂಜಾ ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.ಈ ಸಂಬಂಧ ಬಂಟ್ವಾಳ ನಗರ ಠಾಣೆಯಲ್ಲಿ ಅಕ್ರಮ ಸಂಖ್ಯೆ 126/2020ರಂತೆ ಪ್ರಕರಣ ದಾಖಲಾಗಿತ್ತು. ಬಳಿಕ ಆಗಿನ ವೃತ್ತ ನಿರೀಕ್ಷಕರಾದ ಟಿ.ಡಿ. ನಾಗರಾಜ್ ಅವರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

    ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ್ ಅವರು, ಆರೋಪಿತ ಮಂಗಳೂರು ಬಂದರು ನಿವಾಸಿ ಟಿ.ಪಿ. ಫಾರೂಕ್ (50) ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ಹಾಗೂ ₹70,000 ದಂಡ ವಿಧಿಸಿ 2026ರ ಏಪ್ರಿಲ್ 4ರಂದು ತೀರ್ಪು ಪ್ರಕಟಿಸಿದ್ದಾರೆ.

    ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಶ್ರೀಮತಿ ಜೂಡಿತಾ ಅವರು ಸಮರ್ಥವಾಗಿ ವಾದ ಮಂಡಿಸಿದರು.

    Post Views: 110

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.