Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಎಂಡಿಎಂಎ ಪೂರೈಕೆ ಆರೋಪಿಗಳಿಗೆ ಕಠಿಣ ಸಜೆ: ವಾದ ಮಂಡಿಸಿದ ಅಭಿಯೋಜಕಿಗೆ ಅಭಿನಂದನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಎಂಡಿಎಂಎ ಪೂರೈಕೆ ಆರೋಪಿಗಳಿಗೆ ಕಠಿಣ ಸಜೆ: ವಾದ ಮಂಡಿಸಿದ ಅಭಿಯೋಜಕಿಗೆ ಅಭಿನಂದನೆ

    December 9, 2025
    Share

    ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯ ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಐವರು ಆರೋಪಿಗಳಿಗೆ 12 ರಿಂದ 14 ವರ್ಷಗಳ ಕಠಿಣ ಸಜೆ ಮತ್ತು ದಂಡ ವಿಧಿಸಲು ದ.ಕ. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿ, ಸಾಕ್ಷ್ಯಾಧಾರಗಳನ್ನು ನ್ಯಾಯಾಲಯದ ಮುಂದೆ ಸಾಬೀತುಪಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದ ಸರಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ಅವರನ್ನು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸನ್ಮಾನಿಸಲಾಯಿತು.

    ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ಅವರನ್ನು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಸನ್ಮಾನಿಸಿ ಅಭಿನಂದಿಸಿದರು.

    ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಡಿಸಿಪಿ ಮಿಥುನ್ , ಸೆನ್ ಪೊಲೀಸ್ ಠಾಣೆ ಎಸಿಪಿ ರವೀಶ್ ನಾಯಕ್, ಉಪಸ್ಥಿತರಿದ್ದರು. 2022ರ ಜೂನ್ 14ರಂದು ಮಂಗಳೂರು ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿ ಪತ್ತೆ ಮಾಡಿ ಮಾದಕವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿದ್ದರು. ಈ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

    ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಡಿ.6ರಂದು ಸುಡಾನ್ ದೇಶದ ಓರ್ವ ಪ್ರಜೆ ಸಹಿತ 5 ಆರೋಪಿಗಳಿಗೆ 12 ರಿಂದ 14 ವರ್ಷದ ತನಕ ಕಠಿಣ ಸಜೆ ಮತ್ತು ದಂಡ ಶಿಕ್ಷೆ ವಿಧಿಸಿ ನ್ಯಾಯಾಲಯವು ತೀರ್ಪು ನೀಡಿತ್ತು. 

    Post Views: 113

    Related Posts

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.