Facebook Twitter Instagram
    Saturday, August 1
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯಾಧ್ಯಂತ ಶಾಲಾ-ಕಾಲೇಜುಗಳ ಸುತ್ತಮುತ್ತ ‘ಜಂಕ್ ಫುಡ್’ ನಿಷೇಧ- ಮಾರಾಟ ಮಾಡಿದರೆ ₹3 ಲಕ್ಷದವರೆಗೂ ದಂಡ
    ಇತ್ತೀಚಿನ ಸುದ್ದಿ

    ರಾಜ್ಯಾಧ್ಯಂತ ಶಾಲಾ-ಕಾಲೇಜುಗಳ ಸುತ್ತಮುತ್ತ ‘ಜಂಕ್ ಫುಡ್’ ನಿಷೇಧ- ಮಾರಾಟ ಮಾಡಿದರೆ ₹3 ಲಕ್ಷದವರೆಗೂ ದಂಡ

    August 1, 2026
    Share

    ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆ ಅತ್ಯಂತ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳ ಸುತ್ತಮುತ್ತ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್‌ಫುಡ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆರೋಗ್ಯ ಸಚಿವ ಯು.ಟಿ. ಖಾದರ್ ಆದೇಶ ಹೊರಡಿಸಿದ್ದಾರೆ.

    ಹೆಚ್ಚು ಕೊಬ್ಬಿನಂಶ ಇರುವ ಆಹಾರಗಳ ಕುರಿತು ಆರೋಗ್ಯ ಇಲಾಖೆ ಸಮೀಕ್ಷೆ ನಡೆಸಿದಾಗ ರಾಜ್ಯದ 134 ಶಾಲಾ-ಕಾಲೇಜುಗಳು ತಮ್ಮದೇ ಸ್ವಂತ ಕ್ಯಾಂಟಿನ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಅನಾರೋಗ್ಯಕರ ಜಂಕ್‌ಫುಡ್‌ಗಳನ್ನು ಮಾರಾಟ ಮಾಡುತ್ತಿರುವುದು ತಿಳಿದುಬಂದಿತ್ತು.

    ಶಾಲಾ-ಕಾಲೇಜುಗಳ ಆಡಳಿತ ಮಂಡಳಿಯು ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಸರ್ಕಾರದ ಆದೇಶ ಮೀರಿಯೂ ಜಂಕ್‌ಫುಡ್ ಮಾರಾಟ ಮುಂದುವರಿಸಿದರೆ ಭಾರೀ ದಂಡ ವಿಧಿಸಲಾಗುವುದು ಎಂದು ಸಚಿವರು ಎಚ್ಚರಿಸಿದ್ದಾರೆ.

    ಮುಂದಿನ ದಿನಗಳಲ್ಲಿ ಹೊಸದಾಗಿ ವ್ಯಾಪಾರಿಗಳಿಗೆ ಮತ್ತು ಕ್ಯಾಂಟಿನ್‌ಗಳಿಗೆ ಲೈಸೆನ್ಸ್ ನೀಡುವಾಗಲೇ ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್‌ಫುಡ್ ಮಾರಾಟ ಮಾಡಬಾರದು ಎಂಬ ನಿಯಮವನ್ನು ಕಡ್ಡಾಯಗೊಳಿಸಲಾಗುವುದಾಗಿ ತಿಳಿಸಿದ್ದಾರೆ.

    ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆಯಿಂದಲೇ ಈ ಸಂಬಂಧ ನೋಟಿಸ್ ನೀಡಲಾಗುವುದು. ಶಾಲೆಯ 50 ಮೀಟರ್ ಅಂತರದಲ್ಲಿ ಯಾವ ಆಹಾರ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶವಿದೆ ಮತ್ತು ಯಾವುದಕ್ಕೆ ನಿಷೇಧವಿದೆ ಎಂಬುದರ ಸ್ಪಷ್ಟ ಮಾರ್ಗಸೂಚಿಯನ್ನು ಆದೇಶದಲ್ಲಿ ತಿಳಿಸಲಾಗುವುದು.

    ಜಂಕ್‌ಫುಡ್ ನಿಷೇಧದ ಜತೆಗೆ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಮತ್ತೊಂದು ಮಹತ್ವದ ಆದೇಶ ನೀಡಲಾಗಿದ್ದು, ಇನ್ನು ಮುಂದೆ ರಾಜ್ಯದ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಕ್ಯಾಂಟಿನ್‌ಗಳಲ್ಲಿ ಗ್ರಾಹಕರಿಗೆ ಕಡ್ಡಾಯವಾಗಿ ಬಿಸಿನೀರು ಒದಗಿಸಬೇಕೆಂದು ಸಚಿವ ಯು.ಟಿ. ಖಾದರ್ ಆದೇಶಿಸಿದ್ದಾರೆ.

    Post Views: 7

    Related Posts

    ಕುಂದಾಪುರದಲ್ಲಿ ಬೆಳ್ಳಂಬೆಳಿಗ್ಗೆ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ!!

    August 1, 2026

    ಮೂಡುಬಿದಿರೆ: ಅಕ್ಕನಲ್ಲಿ ವಿಡಿಯೊ ಕಾಲ್‌ ಮಾತನಾಡುತ್ತಾ ಯುವಕ ಆತ್ಮಹತ್ಯೆ!!

    August 1, 2026

    ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ- ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ!!

    August 1, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕುಂದಾಪುರದಲ್ಲಿ ಬೆಳ್ಳಂಬೆಳಿಗ್ಗೆ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ!!

    August 1, 2026

    ರಾಜ್ಯಾಧ್ಯಂತ ಶಾಲಾ-ಕಾಲೇಜುಗಳ ಸುತ್ತಮುತ್ತ ‘ಜಂಕ್ ಫುಡ್’ ನಿಷೇಧ- ಮಾರಾಟ ಮಾಡಿದರೆ ₹3 ಲಕ್ಷದವರೆಗೂ ದಂಡ

    August 1, 2026

    ಮೂಡುಬಿದಿರೆ: ಅಕ್ಕನಲ್ಲಿ ವಿಡಿಯೊ ಕಾಲ್‌ ಮಾತನಾಡುತ್ತಾ ಯುವಕ ಆತ್ಮಹತ್ಯೆ!!

    August 1, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.