Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ಪ್ರಮಾಣ ವಚನ ಸ್ವೀಕಾರ
    ಇತ್ತೀಚಿನ ಸುದ್ದಿ

    ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ಪ್ರಮಾಣ ವಚನ ಸ್ವೀಕಾರ

    July 19, 2025
    Share

    ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್, ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು.

    ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾ. ಬಖ್ರು ಅವರು 1966ರಲ್ಲಿ ನಾಗಪುರದಲ್ಲಿ ಜನಿಸಿದರು. ದೆಹಲಿಯ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್‌ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿದ್ದಾರೆ. 1989ರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿಯೂ ಅರ್ಹತೆ ಪಡೆದಿದ್ದರು. ಆನಂತರ 1990ರಲ್ಲಿ ಎಲ್‌ಎಲ್‌ಬಿ ಪದವಿ ಪಡೆದು, ಅದೇ ವರ್ಷ ದೆಹಲಿ ವಕೀಲರ ಪರಿಷತ್‌ನಲ್ಲಿ ವಕೀಲರಾಗಿ ನೋಂದಣಿ ಮಾಡಿಸಿದ್ದರು.

    ನ್ಯಾ.ವಿಭೂ ಭಕ್ರು ಅವರು ವಕೀಲರಾಗಿದ್ದ ಅವಧಿಯಲ್ಲಿ ಸುಪ್ರೀಂ ಕೋರ್ಟ್‌, ದೆಹಲಿ ಹೈಕೋರ್ಟ್‌, ಕಂಪನಿ ಕಾನೂನು ಮಂಡಳಿ ಮತ್ತು ಇತರೆ ನ್ಯಾಯ ಮಂಡಳಿಗಳಲ್ಲಿ ವಕೀಲಿಕೆ ಮಾಡಿದ್ದಾರೆ. 2011ರಲ್ಲಿ ಹಿರಿಯ ವಕೀಲರಾಗಿ ಅವರು ಪದೋನ್ನತಿ ಪಡೆದಿದ್ದರು. 2013ರ ಏಪ್ರಿಲ್‌ 17ರಂದು ದೆಹಲಿ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು 2015ರ ಮಾರ್ಚ್‌ 18ರಂದು ಕಾಯಂಗೊಂಡಿದ್ದರು.

    Post Views: 237

    Related Posts

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.