Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ.ಕ.ಜಿಲ್ಲಾ ಕಾರಾಗೃಹದಲ್ಲಿ ಕೈದಿಗೆ ಹಲ್ಲೆಗೈದ ಸಹಕೈದಿಗಳ ವಿರುದ್ಧ ಕೆ-ಕೋಕಾ ಪ್ರಕರಣ ದಾಖಲು  
    ಇತ್ತೀಚಿನ ಸುದ್ದಿ

    ದ.ಕ.ಜಿಲ್ಲಾ ಕಾರಾಗೃಹದಲ್ಲಿ ಕೈದಿಗೆ ಹಲ್ಲೆಗೈದ ಸಹಕೈದಿಗಳ ವಿರುದ್ಧ ಕೆ-ಕೋಕಾ ಪ್ರಕರಣ ದಾಖಲು  

    July 23, 2025
    Share

    ಮಂಗಳೂರು: ದ.ಕ.ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಹಲ್ಲೆ ನಡೆಸಿದ ನಾಲ್ವರು ಸಹ ಕೈದಿಗಳ ವಿರುದ್ಧ ಕೆ-ಕೋಕಾ (ಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಸ್ಡ್ ಆ್ಯಕ್ಟ್) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

    ಉಳ್ಳಾಲ ಠಾಣಾ ವ್ಯಾಪ್ತಿಗೆ ಸಂಬಂಧಿಸಿದ ಪ್ರಕರಣದ ಆರೋಪಿ ಮಿಥುನ್ ಎಂಬಾತನಿಗೆ ಸಹ ಕೈದಿಗಳಾದ ಧನು ಯಾನೆ ಧನುಷ್ ಭಂಡಾರಿ, ಸಚಿನ್ ತಲಪಾಡಿ, ದಿಲೇಶ್ ಬಂಗೇರ ಯಾನೆ ದಿಲ್ಲು, ಲಾಯಿ ವೇಗಸ್ ಎಂಬವರು ಜು.9ರಂದು ಸಂಜೆ 5ಕ್ಕೆ ಜೈಲು ಸಿಬ್ಬಂದಿಯ ಕಣ್ತಪ್ಪಿಸಿ ಹಲ್ಲೆ ನಡೆಸಿ 50 ಸಾವಿರ ರೂ. ನೀಡುವಂತೆ ಒತ್ತಾಯಿಸಿದ್ದರು. ಅಲ್ಲದೆ ಜೈಲು ಅಧಿಕಾರಿಗಳಿಗೆ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಹಾಗಾಗಿ ಮಿಥುನ್ ಪ್ರಾಣಭಯದಿಂದ ದೂರು ನೀಡದೆ ಹಲ್ಲೆ ನಡೆಸಿದ್ದ ಕೈದಿ ಸಚಿನ್ ಎಂಬಾತ ಕೊಟ್ಟ ಎರಡು ಮೊಬೈಲ್ ಸಂಖ್ಯೆಗೆ ಪತ್ನಿಯ ಮೂಲಕ 20 ಸಾವಿರ ರೂ. ಫೋನ್ ಪೇ ಮಾಡಿಸಿದ್ದ.

    ಜು.12ರಂದು ಮಂಗಳೂರು ಕೇಂದ್ರ ಸಹಾಯಕ ಪೊಲೀಸ್ ಆಯಕ್ತರು ಹಾಗೂ ಬರ್ಕೆ ಪೊಲೀಸ್ ಠಾಣೆಯ ನಿರೀಕ್ಷಕರು ಕಾರಾಗೃಹದ ತಪಾಸಣೆ ಮಾಡಲು ತೆರಳಿದ ವೇಳೆ ಈ ಪ್ರಕರಣ ಬೆಳಕಿಗೆ ಬಂದಿತ್ತು. ಹಾಗೇ ಜಿಲ್ಲಾ ಕಾರಾಗೃಹದ ಅಧೀಕ್ಷ ಶರಣಬಸಪ್ಪ ಬರ್ಕೆ ಠಾಣೆಗೆ ದೂರು ನೀಡಿದ್ದರು. ಇದೀಗ ಕೈದಿಗೆ ಜೈಲಿನಲ್ಲೇ ಹಲ್ಲೆ ನಡೆಸಿದ್ದ ಸಹಕೈದಿಗಳ ವಿರುದ್ಧ ಕೆ-ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

    ಈಗಾಗಲೆ ಆರೋಪಿಗಳು ಒಂದಕ್ಕಿಂತ ಹೆಚ್ಚು ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಇದೀಗ ಕೆ-ಕೋಕಾ ಕಾಯ್ದೆಯಡಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿ 5 ವರ್ಷದ ಶಿಕ್ಷೆ ವಿಧಿಸಬಹುದಾಗಿದ್ದು, ಅದನ್ನು ಜೀವಾವಧಿ ಶಿಕ್ಷೆಯವರಿಗೆ ವಿಸ್ತರಿಸಬಹುದಾಗಿದೆ. ಆರೋಪಿಗಳ ಕೃತ್ಯದಿಂದ ಸಾವು ಸಂಭವಿಸಿದರೆ ಜೀವಾವಧಿ ಅಥವಾ ಮರಣದಂಡನೆ ಶಿಕ್ಷೆ ವಿಧಿಸಬಹುದಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

    Post Views: 141

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.