ಕಾಳಿ ಎನ್ನುವ ಸಾಕ್ಷ್ಯಚಿತ್ರದ ಪೋಸ್ಟರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಪೋಸ್ಟರ್ ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಹೌದು ಭಾರತೀಯ ಚಲನಚಿತ್ರ ನಿರ್ಮಾಪಕಿ, ಕವಯಿತ್ರಿ ಮತ್ತು ನಟಿ ಲೀನಾ ಮಣಿಮೇಕಲೈ ಅವರು ಬಿಡುಗಡೆ ಮಾಡಿದ ಹೊಸ ಪೋಸ್ಟರ್ ಗೆ ಆಕ್ರೋಶ ವ್ಯಕ್ತವಾಗುತ್ತಿದೆ. ನಟಿ ಲೀನಾ ಮಣಿಮೇಕಲೈ ಅವರು ತಮ್ಮ ಡಾಕ್ಯುಮೆಂಟರಿಯ ಪೋಸ್ಟರ್ ನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ಪೋಸ್ಟರ್ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಟ್ವಿಟರ್ ನಲ್ಲಿ ಭಾರೀ ವಿರೋಧಗಳು ವ್ಯಕ್ತವಾಗುತ್ತಿವೆ.ಇನ್ನು ಈ ಪೋಸ್ಟರ್ ನಲ್ಲಿ ಹಿಂದೂ ದೇವತೆ ಕಾಳಿಯು ಸಿಗರೇಟ್ ಸೇದುತ್ತಿರುವುದನ್ನು ತೋರಿಸಲಾಗಿದೆ. ಲೀನಾ ಅವರು ಆ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದಾರೆ ಎಂದು ಹಲವರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕಾಳಿಯ ವೇಷದಲ್ಲಿರುವ ಕಲಾವಿದೆಯಾ ಒಂದು ಕೈಯಲ್ಲಿ ತ್ರಿಶೂಲ ಮತ್ತು ಒಂದು ಕೈಯಲ್ಲಿ LGBTQ ಸಮುದಾಯದ ಧ್ವಜವನ್ನು ಹಿಡಿದಿರೋದು ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರ ವಿರುದ್ಧ ಕಠಿಣ ಕ್ರಮ ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿದ್ದಾರೆ.