Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಉಡುಪಿ: ಗರುಡ ಗ್ಯಾಂಗ್‌ನ ಸದಸ್ಯ ಕಬೀರ್ ಹುಸೇನ್ ಗೂಂಡಾ ಕಾಯ್ದೆಯಡಿ ಬಂಧನ
    Uncategorized

    ಉಡುಪಿ: ಗರುಡ ಗ್ಯಾಂಗ್‌ನ ಸದಸ್ಯ ಕಬೀರ್ ಹುಸೇನ್ ಗೂಂಡಾ ಕಾಯ್ದೆಯಡಿ ಬಂಧನ

    July 11, 2025
    Share

    ಉಡುಪಿ: ಹಲವಾರು ಕ್ರಿಮಿನಲ್‌ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪದ ಮೇಲೆ ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್ ಯಾನೆ ಕಬೀರ್ ಹುಸೇನ್(46) ಎಂಬಾತನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲು ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯವರು ಆದೇಶ ಹೊರಡಿಸಿದ್ದು, ಅದರಂತೆ ಆತನನ್ನು ಬಂಧಿಸಿ ಮೈಸೂರು ಸೆಂಟ್ರಲ್‌ ಜೈಲಿಗೆ ಕಳುಹಿಸಲಾಗಿದೆ.

    ಈತನ ಮೇಲೆ ಉಡುಪಿ ಜಿಲ್ಲೆಯ ಕಾರ್ಕಳ ನಗರ, ಹಿರಿಯಡ್ಕ, ಪಡುಬಿದ್ರಿ, ಮಣಿಪಾಲ, ಶಿರ್ವ, ಕಾಪು ಠಾಣೆಗಳ ವ್ಯಾಪ್ತಿಯಲ್ಲಿ 2005 ರಿಂದೀಚೆಗೆ ನಡೆದ ಹಲವಾರು ಕೊಲೆ, ಕೊಲೆ ಯತ್ನ, ದರೋಡೆ, ಸುಲಿಗೆ, ಕಳ್ಳತನ, ಜಾನುವಾರು ಕಳವು, ಸರಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮತ್ತಿತರ 17 ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಪ್ರಕರಣಗಳಿವೆ. ಉಡುಪಿ ಜಿಲ್ಲೆಯಲ್ಲಿ ಮಾತ್ರವಲ್ಲದೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮತ್ತು ಕೊಪ್ಪ, ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು, ಮಂಗಳೂರು ನಗರ ವ್ಯಾಪ್ತಿಯ ಸುರತ್ಕಲ್ ಠಾಣೆಯ ಪ್ರಕರಣಗಳಲ್ಲೂ ಭಾಗಿಯಾಗಿರುತ್ತಾನೆ. ಈತನು ಗರುಡ ಗ್ಯಾಂಗನ ಸಕ್ರಿಯ ಸದಸ್ಯನಾಗಿರುತ್ತಾನೆ. ಈತನ ಮೇಲಿರುವ ಕೇಸುಗಳ ಪೈಕಿ ಈಗಾಗಲೇ ಎರಡು ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು, ಸಜೆ ಹೊಂದಿದ್ದು, 8 ಪ್ರಕರಣಗಳಲ್ಲಿ ಖುಲಾಸೆ ಹೊಂದಿರುತ್ತಾನೆ. ಮೂರು ಪ್ರಕರಣಗಳಲ್ಲಿ ರಾಜಿ ಮಾಡಿಕೊಂಡಿದ್ದು, ಎರಡು ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿವೆ. ಉಳಿದ ಎರಡು ಪ್ರಕರಣಗಳು ಪೊಲೀಸ್ ತನಿಖೆಯಲ್ಲಿವೆ ಎಂದು ಪೊಲೀಸ್‌ ಪ್ರಕಟನೆ ತಿಳಿಸಿದೆ.

    Post Views: 211

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.