Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಅಕ್ರಮ ಜಾನುವಾರು ಸಾಗಾಟ ಪತ್ತೆ: 20 ಜಾನುವಾರುಗಳ ರಕ್ಷಣೆ, ಮೂವರ ವಿರುದ್ಧ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಕಡಬ: ಅಕ್ರಮ ಜಾನುವಾರು ಸಾಗಾಟ ಪತ್ತೆ: 20 ಜಾನುವಾರುಗಳ ರಕ್ಷಣೆ, ಮೂವರ ವಿರುದ್ಧ ಪ್ರಕರಣ ದಾಖಲು

    April 4, 2026
    Share

    ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಡಬ ಪೊಲೀಸರು ಪತ್ತೆಹಚ್ಚಿ, 20 ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಏಪ್ರಿಲ್ 3ರಂದು ಮುಂಜಾನೆ ನಡೆದಿದೆ.

    ಪೆರಿಯಶಾಂತಿ ಕಡೆಯಿಂದ ಮರ್ಧಾಳ ಕಡೆಗೆ ಕಂಟೈನರ್ ಲಾರಿಯಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಜಂಬುರಾಜ್ ಮಹಾಜನ್ ಪೊಲೀಸ್ ಉಪನಿರೀಕ್ಷಕರು ಕಡಬ ಪೊಲೀಸ್ ಠಾಣೆ ಸಿಬ್ಬಂದಿಗಳೊಂದಿಗೆ ನೂಜಿಬಾಳ್ತಿಲ ಗ್ರಾಮದ ಕನ್ವರೆ ಪ್ರದೇಶದಲ್ಲಿ ದಾಳಿ ನಡೆಸಿದರು.

    ಈ ವೇಳೆ KA 11 B 9413 ನೋಂದಣಿಯ ಕಂಟೈನರ್ ಲಾರಿಯನ್ನು ತಡೆದು ಪರಿಶೀಲಿಸಿದಾಗ, ಲಾರಿಯಲ್ಲಿ 20 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಪತ್ತೆಯಾಯಿತು. ಲಾರಿಯಲ್ಲಿದ್ದ ವ್ಯಕ್ತಿಯನ್ನು ವಿಚಾರಿಸಿದಾಗ, ಆತ ಹಾಸನ ಜಿಲ್ಲೆಯ ಬೇಲೂರು ನಿವಾಸಿ ಇರ್ಫಾನ್ (26) ಎಂದು ತಿಳಿದುಬಂದಿದೆ.ಜಾನುವಾರು ಸಾಗಾಟಕ್ಕೆ ಸಂಬಂಧಿಸಿದಂತೆ ಯಾವುದೇ ಪರವಾನಿಗೆ ಇಲ್ಲದೇ, ಹಾಸನದಿಂದ ಕೇರಳಕ್ಕೆ ಸಾಗಾಟ ಮಾಡುತ್ತಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.

    ಪೊಲೀಸರು ಲಾರಿ ಹಾಗೂ ಜಾನುವಾರುಗಳನ್ನು ಸ್ವಾಧೀನಪಡಿಸಿಕೊಂಡಿದ್ದು, ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 36/2026 ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ The Karnataka Prevention of Slaughter and Preservation of Cattle Act, 2020 ರ ಕಲಂ 4, 7, 12 ಹಾಗೂ Prevention of Cruelty to Animals Act, 1960 ರ ಕಲಂ 4, 11 ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.

    Post Views: 88

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.