Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಕದ್ರಿ ಪಾರ್ಕ್‌ನಲ್ಲಿ ಡಿ 7 ರಿಂದ ಎರಡು ದಿನಗಳ ಬೃಹತ್ ‘ವೈನ್’ ಮೇಳ..!!
    ಇತ್ತೀಚಿನ ಸುದ್ದಿ

    ಮಂಗಳೂರು : ಕದ್ರಿ ಪಾರ್ಕ್‌ನಲ್ಲಿ ಡಿ 7 ರಿಂದ ಎರಡು ದಿನಗಳ ಬೃಹತ್ ‘ವೈನ್’ ಮೇಳ..!!

    December 6, 2024
    Share

    ಮಂಗಳೂರು:  ವೈನ್ ಪ್ರಿಯರಿಗೊಂದು ಶುಭಸುದ್ದಿ, ಆರೋಗ್ಯಕ್ಕೆ ಹಿತಕರವಾಗಿರುವ ‘ವೈನ್’ ಮೇಳವನ್ನು (Wine Festival )ಮಂಗಳೂರು ನಗರದಲ್ಲಿ  ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್  ರತ್ನಾ’ಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್  ಸಹಭಾಗಿತ್ವದಲ್ಲಿ ಆಯೋಜಿಸಿದೆ.

    ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಡಿ.7 ಹಾಗೂ 8ರಂದು ನಗರದ ಕದ್ರಿಪಾರ್ಕ್ ನಲ್ಲಿ ದ್ರಾಕ್ಷಾ ರಸ ಪ್ರದರ್ಶನ, ಮಾರಾಟ ಹಾಗೂ ಬೃಹತ್ ವೈನ್ ಮೇಳ ಆಯೋಜಿಸಲಾಗಿದೆ.  ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಹಿತದೃಷ್ಟಿಯಿಂದ ಬೆಳೆಗೆ ಉತ್ತಮ ಬೇಡಿಕೆ ಹಾಗೂ ಬೆಲೆ ಸಿಗುವ ಉದ್ದೇಶಕ್ಕಾಗಿ ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘ, ಕರ್ನಾಟಕ ದ್ರಾಕ್ಷಾ ರಸ ಮಂಡಳಿ ಹಾಗೂ ಕರ್ನಾಟಕದ ವೈನರಿಗಳ ಸಹಕಾರದೊಂದಿಗೆ ದ್ರಾಕ್ಷಾ ರಸದ ಉತ್ಪಾದನೆ, ದಾಸ್ತಾನು ಹಾಗೂ ದ್ರಾಕ್ಷಾ ರಸದ ಪೇಯವನ್ನು ಸವಿಯುವ ವಿಧಾನ ಮಾತ್ರವಲ್ಲ, ಇದು ಉತ್ತಮ ಆರೋಗ್ಯಕರ ಪಾನೀಯವಾಗಿರುವುದರಿಂಧ ಇದರ ಬಗ್ಗೆ ಸೂಕ್ತ ಮಾಹಿತಿ ನೀಡಲಾಗುತ್ತದೆ. ‘ಪ್ರದರ್ಶನ-ಸವಿಯುವಿಕೆ-ಮಾರಾಟ’ ಎಂಬ ಘೋಷವಾಕ್ಯದೊಂದಿಗೆ ವೈನ್ ಮೇಳ ಆಚರಿಸಲ್ಪಡುತ್ತಿದ್ದು ದ್ರಾಕ್ಷಾ ರಸ ಉತ್ಪಾದಕ ಸಂಸ್ಥೆಗಳ ಮೂಲಕ ಅತ್ಯಾಕರ್ಷಕ ದರ ಹಾಗೂ ಅತ್ಯುತ್ತಮ ಕೊಡುಗೆಗಳೊಂದಿಗೆ ಮಾರಾಟವನ್ನು ಏರ್ಪಡಿಸಲಾಗಿದೆ.

    ಮೇಳದಲ್ಲಿ ಮಧ್ಯಸಾರ ರಹಿತ ವೈನ್‌ಗಳಿದ್ದು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಬ್ರಾಂಡ್‌ನ ವೈನ್‌ಗಳು ಮೇಳದಲ್ಲಿವೆ. ವೈನ್ ಸೇವನೆಯಿಂದ ಹತ್ತು ಹಲವು ಆರೋಗ್ಯಕರ ಲಾಭಗಳಿರುವ ಬಗ್ಗೆ ಜರ್ನಲ್ ನೇಚರ್ ಎಂಬ ವರದಿಯಲ್ಲಿ ಪ್ರಕಟಗೊಂಡ ಅಧ್ಯಯನದಲ್ಲಿ ಈ ಬಗ್ಗೆ ಸಾಬೀತು ಮಾಡಲಾಗಿದೆ. ಸಾಂಪ್ರದಾಯಿಕವಾಗಿ ತಯಾರಾದ ರೆಡ್‌ವೈನ್‌ನಲ್ಲಿ ರೆಸ್ವೆರಾಟ್ರೋಲ್ ಮತ್ತು ಫ್ಲೇವನಾಯ್ಡ ಗಳ ಅಂಶ ಹೆಚ್ಚಿರುತ್ತದೆ. ಇವುಗಳು ಹೃದಯದ ಆರೋಗ್ಯವನ್ನು ಚೆನ್ನಾಗಿ ಕಾಪಾಡುವಲ್ಲಿ ಮಹತ್ತರ ಪಾತ್ರ ವಹಿಸುತ್ತವೆ. ವೈನ್‌ನ ನಿಯಮಿತ ಸೇವನೆಯಿಂದ ನೋಡುವವರ ಕಣ್ಣಿಗೆ ಸದಾ ಯೌವನಭರಿತರಾಗಿ ಕಾಣಿಸುವುದರ ಜೊತೆಗೆ ಆಯಸ್ಸು ಕೂಡ ಹೆಚ್ಚಾಗುತ್ತದೆ. ರಕ್ತದೊತ್ತಡವನ್ನು ನಿಯಂತ್ರಿಸಿ ರಕ್ತದ ಚಲನೆಯ ಸಮತೋಲನವನ್ನು ಕಾಪಾಡುತ್ತದೆ. ಜೀರ್ಣಕ್ರಿಯೆಗೂ ಸಹಕಾರಿಯಾಗಿದೆ.
    2 ದಿನಗಳ ವರೆಗೆ ನಡೆಯುವ ಈ ದ್ರಾಕ್ಷಾ ರಸ ಪ್ರದರ್ಶನ, ಮಾರಾಟ ಹಾಗೂ ಬೃಹತ್ ವೈನ್ ಮೇಳದಲ್ಲಿ ದೇಶಿಯ, ವಿದೇಶಿಯ ವೈನ್ ಬ್ರಾಂಡಿನ ಪರಿಚಯ, ವೈನ್‌ನ ಆರೋಗ್ಯಕರ ಉಪಯೋಗ, ವೈನ್‌ನ ಉತ್ಪಾದನಾ ವಿಧಾನ ಹಾಗೂ ಬಳಕೆ ಬಗ್ಗೆ ಗ್ರಾಹಕರಿಗೆ ಮಾಹಿತಿ ನೀಡಲಾಗುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 289

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.