Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ್ವೇಷ ಭಾಷಣ : ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು ದಾಖಲು
    ಇತ್ತೀಚಿನ ಸುದ್ದಿ

    ದ್ವೇಷ ಭಾಷಣ : ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು ದಾಖಲು

    October 26, 2025
    Share

    ಪುತ್ತೂರು: ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಸಂಪ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಅ.20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಹಿಳೆಯರನ್ನು ಅವಮಾನಿಸಿ, ಗರ್ಭಿಣಿ ಮಹಿಳೆಯರನ್ನು ನಿಂದನೆ ಮಾಡಿದ್ದಾರೆಂದು ಆರೋಪಿಸಿ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ದೂರು ನೀಡಿದ್ದಾರೆ.

    ಕಲ್ಲಡ್ಕ ಪ್ರಭಾಕರ ಭಟ್ ತನ್ನ ಭಾಷಣದಲ್ಲಿ ”ಆಚೆ ಮನೆಯಲ್ಲಿ ಒಬ್ಬಳು ಬ್ಯಾರ್ದಿ ಇದ್ದು, ಅವಳು 6ನೆಯದ್ದು ಆಗಿ 7ನೇ ಗರ್ಭಿಣಿಯಾಗಿದ್ದಳು. ಅವಳಿಗೆ ಯಾರಾದ್ರು ಕೇಳಿದ್ರಾ ? ನೀನು ನಾಯಿ ಮರಿ ಹಾಕಿದ ಹಾಗೆ ಹಾಕ್ತಾ ಇದ್ದೀಯಾ ಅಂತ ಕೇಳಿದ್ರಾ ? ಕೇಳುವ ದೈರ್ಯವೂ ಇಲ್ಲ. ಎರಡನೆಯದಾಗಿ ಅವರು ಹೇಳ್ತಾರೆ. ಅದು ಅಲ್ಲಾಹನಿಗೋಸ್ಕರ. ನಮ್ಮ ಮಕ್ಕಳು ಅಲ್ಲಾಹನಿಗೋಸ್ಕರ ಅನ್ನುತ್ತಾರೆ. ನೀವೇನಾದರೂ ಮಹಾಲಿಂಗೇಶ್ವರನಿಗಾಗಿ ಮಕ್ಕಳು ಮಾಡ್ತೀರಾ ? ನಮ್ಮ ಜನಸಂಖ್ಯೆ ಜಾಸ್ತಿಯಾಗಬೇಕು.

    ಮಂಗಳೂರು ವಿಧಾನಸಭಾ ಕ್ಷೇತ್ರ ಉಳ್ಳಾಲ ಅಂತ ಏನು ಹೇಳ್ತಿವಿ ಅಲ್ಲಿ ಹಿಂದೂ ಗೆಲ್ಲಲು ಸಾಧ್ಯವೇ ಇಲ್ಲ. ಅಲ್ಲಿ ಖಾದರೇ ಗೆಲ್ಲೋದು. ಯಾಕೆಂದರೆ ಒಂದು ಲಕ್ಷದ ಹತ್ತು ಸಾವಿರ ಬ್ಯಾರಿಗಳದ್ದೇ ಓಟು ಇದೆ. ಹಿಂದೂಗಳು 90 ಸಾವಿರ ಇರೋದು. ಗೆಲ್ಲೋದು ಯಾವಾಗ ? ಅದು ಎಲ್ಲಾ ಕಡೆಗೂ ಹತ್ತಿರ ಹತ್ತಿರ ಬರ್ತಾ ಉಂಟು. ನಾವು ಗೆದ್ದೇವಾ? ಗೆಲ್ಲಲು ಸಾಧ್ಯವೇ ಇಲ್ಲ. ನಮ್ಮನ್ನು ಸರ್ವನಾಶ ಮಾಡ್ತಾರೆ.

    ಹಾಗಾಗಿ ನಮ್ಮ ಮನೆಯಲ್ಲಿ 3ಕ್ಕಿಂತ ಕಡಿಮೆ ಮಕ್ಕಳು ಇರಬಾರದು ಎಂದು ಹೇಳಿಕೆ ನೀಡಿದ್ದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಸಂಪ್ಯ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

    ದ್ವೇಷ ಭಾಷಣ ತಡೆ ಸಂಬಂಧ ಸುಪ್ರಿಂ ಕೋರ್ಟ್ ಮಾರ್ಗದರ್ಶಿ ಸೂತ್ರಗಳಂತೆ ಪೊಲೀಸರು ಈ ಪ್ರಕರಣವನ್ನು ಎಫ್‌ಐಆ‌ರ್ ಮಾಡಬೇಕು ಎಂದು ಸಾಮಾಜಿಕ ಹೋರಾಟಗಾರ, ಹಿರಿಯ ಪತ್ರಕರ್ತ ನವೀನ್ ಸೂರಿಂಜೆ ಅವರು ಒತ್ತಾಯಿಸಿದ್ದಾರೆ.

    Post Views: 138

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.