Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಂಬಳ ಆಯೋಜನೆಗೆ ಬಜೆಟ್‌ನಲ್ಲಿ 2 ಕೋಟಿ ರೂ. ಅನುದಾನ ಮೀಸಲಿರಿಸಲು ಸರ್ಕಾರಕ್ಕೆ ಮನವಿ
    ಇತ್ತೀಚಿನ ಸುದ್ದಿ

    ಕಂಬಳ ಆಯೋಜನೆಗೆ ಬಜೆಟ್‌ನಲ್ಲಿ 2 ಕೋಟಿ ರೂ. ಅನುದಾನ ಮೀಸಲಿರಿಸಲು ಸರ್ಕಾರಕ್ಕೆ ಮನವಿ

    October 11, 2025
    Share

    ಜಾನಪದ ಕ್ರೀಡೆ ಕಂಬಳ ನಡೆಸಲು ಬಜೆಟ್‌ನಲ್ಲಿ 2 ಕೋಟಿ ರೂಪಾಯಿ ಅನುದಾನ ಮೀಸಲಿರಿಸುವಂತೆ ರಾಜ್ಯ ಕಂಬಳ ಅಸೋಸಿಯೇಷನ್ ಮುಖ್ಯಮಂತ್ರಿಗೆ ಮನವಿ ಮಾಡಿದೆ ಎಂದು ಕಂಬಳ ಅಸೋಸಿಯೇಷನ್ ಅಧ್ಯಕ್ಷ ಡಾ.ಐಕಳಬಾವ ದೇವೀಪ್ರಸಾದ್ ಶೆಟ್ಟಿ ಹೇಳಿದ್ದಾರೆ. 

    ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್‌ನಲ್ಲಿ ಈ ಮೊತ್ತ ಮೀಸಲಿರಿಸಿ ಕಂಬಳ ಆಯೋಜಕರಿಗೆ ಒದಗಿಸಿದರೆ ಕಂಬಳಕ್ಕೆ ಪೂರಕ ಯೋಜನೆ ರೂಪಿಸಲು ಅನುಕೂಲವಾಗಲಿದೆ. ಈ ಹಿಂದೆ ಒಂದು ಕಂಬಳ ನಡೆಸಲು 5 ಲಕ್ಷ ರೂಪಾಯಿ ನೀಡಲಾಗಿತ್ತು.

    ಈ ಬಾರಿ 2 ಲಕ್ಷ ರೂಪಾಯಿ ಅನುದಾನ ನೀಡಲಾಗುತ್ತಿದೆ. 2 ಕೋಟಿ ರೂಪಾಯಿ ಮೀಸಲಿರಿಸಿದರೆ ಒಂದು ಕಂಬಳಕ್ಕೆ ತಲಾ 8 ಲಕ್ಷ ರೂಪಾಯಿಯಂತೆ ಒಟ್ಟು 25 ಕಂಬಳಗಳಿಗೆ ಅನುದಾನ ನೀಡಲು ಸಾಧ್ಯವಾಗಲಿದೆ. ಈ ಬಗ್ಗೆ ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಮತ್ತೊಮ್ಮೆ ಸರ್ಕಾರಕ್ಕೆ, ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದರು. 

    ರಾಜ್ಯ ಸರಕಾರ ಯುವಜನ ಸಬಲೀಕರಣ ಮತ್ತು ಕ್ರೀಡಾ ಪ್ರಾಧಿಕಾರದಿಂದ ರಾಜ್ಯ ಕಂಬಳ ಅಸೋಸಿಯೇಶನ್‌ಗೆ ಅಧಿಕೃತ ಮಾನ್ಯತೆ ನೀಡಲಾಗಿದೆ. ರಾಜ್ಯ ಕಂಬಳ ಅಸೋಸಿಯೇಶನ್‌ಗೆ ಜಿಲ್ಲಾಧಿಕಾರಿಯಿಂದ ಅನುಮೋದನೆಗೊಂಡ ಪದಾಧಿಕಾರಿಗಳ ಪಟ್ಟಿಗೆ ಮಾನ್ಯತೆ ದೊರಕಿದೆ. ಮುಂದಿನ ಮೂರು ವರ್ಷದ ಅವಧಿಗೆ ಅಧಿಕಾರಾವಧಿ ಇರಲಿದೆ ಎಂದವರು ಹೇಳಿದರು.

    ಕಂಬಳ ಸಮಿತಿಯು ಮುಂದಿನ ವಾರ ಮಂಗಳೂರಲ್ಲಿ ಸಭೆ ಸೇರಲಿದೆ. ಮುಂದಿನ ದಿನಗಳಲ್ಲಿ ಕಂಬಳ ನಡೆಸುವ ಕುರಿತಂತೆ ರೂಪುರೇಷೆಗಳನ್ನು ಕೈಗೊಳ್ಳಲಾಗುತ್ತದೆ. ಇದರಲ್ಲಿ ಕಂಬಳವನ್ನು ಐಪಿಎಲ್ ಮಾದರಿ ಪ್ರಾಯೋಜಕತ್ವದಲ್ಲಿ ನಡೆಸುವ ಬಗ್ಗೆ ಯೋಜನೆ ರೂಪಿಸಲಾಗುತ್ತಿದೆ.ರಾಜ್ಯ ಕಂಬಳ ಆಯೋಜಕರಿಗೆ ಸಹಕಾರ, ಪ್ರತಿ ಕಂಬಳಗಳು ಕ್ರೀಡಾ ಪ್ರಾಧಿಕಾರದ ಲಾಂಛನದ ಅಡಿಯಲ್ಲಿ ನಡೆಯುವುದು, ಕಂಬಳವನ್ನು ನಿಗದಿತ ವೇಳೆಯಲ್ಲಿ ನಡೆಸುವುದು.

    ಕಂಬಳ ಓಟಗಾರರಿಗೆ, ತೀರ್ಪುಗಾರರಿಗೆ, ಕಾರ್ಮಿಕರಿಗೆ ಸರ್ಕಾರದಿಂದ ಭತ್ಯೆ ಮತ್ತು ಆರೋಗ್ಯ ವಿಮೆ ಒದಗಿಸುವುದು, ಕಂಬಳದ ಅಧಿಕೃತ ಧ್ವಜ ಮತ್ತು ಲಾಂಛನ ರಚನೆ. ಕಂಬಳ ಆಯೋಜಕರು ನಡೆಸುವ ಕಂಬಳಕ್ಕೆ ಅಸೋಸಿಯೇಷನ್ ಮೂಲಕವೇ ಅನುಮತಿ ಪಡೆಯುವುದು. ಇದರ ಮೂಲಕವೇ ಸರ್ಕಾರದ ಅನುದಾನ ಹಂಚಿಕೆ ಮಾಡುವುದು.

    ಕಂಬಳದ ಬೈಲಾ, ನೀತಿ, ನಿಯಮಗಳನ್ನು ಕಾಲಕಾಲಕ್ಕೆ ತಕ್ಕಂತೆ ರೂಪಿಸುವ ಜವಾಬ್ದಾರಿ ರಾಜ್ಯ ಕಂಬಳ ಅಸೋಸಿಯೇಷನ್‌ನದ್ದು. ಈಗಾಗಲೇ ಬೈಲಾ ರಚನೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ವಾರ್ಷಿಕ ಮಹಾಸಭೆ, ಆಡಿಟ್ ಕ್ಯಾಲೆಂಡರ್ ಆಫ್ ಈವೆಂಟ್ ಮತ್ತು ಅಸೋಸಿಯೇಷನ್ ಕಾರ್ಯ ಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸುವ ಯೋಜನೆಯನ್ನು ಹೊಂದಲಾಗಿದೆ ಎಂದವರು ಹೇಳಿದರು. ಈ ವೇಳೆ ಕಾರ್ಯದರ್ಶಿ ವಿಜಯ ಕುಮಾರ್ ಕಂಗಿನಮನೆ, ಕೋಶಾಧಿಕಾರಿ ಲೋಕೇಶ್ ಶೆಟ್ಟಿ ಮುಚ್ಚೂರು ಇದ್ದರು.

    Post Views: 140

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.