Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾತ್ರಿ ವೇಳೆ ಕಂಬಳ, ಜಾತ್ರೆ ಯಕ್ಷಗಾನ ಹಾಗೂ ಇನ್ನಿತರ ಧಾರ್ಮಿಕ ಆಚರಣೆಗಳಿಗೆ ಯಾವುದೇ ಅಡ್ಡಿ ಇಲ್ಲ..!
    ಇತ್ತೀಚಿನ ಸುದ್ದಿ

    ರಾತ್ರಿ ವೇಳೆ ಕಂಬಳ, ಜಾತ್ರೆ ಯಕ್ಷಗಾನ ಹಾಗೂ ಇನ್ನಿತರ ಧಾರ್ಮಿಕ ಆಚರಣೆಗಳಿಗೆ ಯಾವುದೇ ಅಡ್ಡಿ ಇಲ್ಲ..!

    November 16, 2025
    Share

    ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುವ ಕಂಬಳ, ಜಾತ್ರೆ ಯಕ್ಷಗಾನ ಹಾಗೂ ಇನ್ನಿತರ ಧಾರ್ಮಿಕ ಆಚರಣೆಗಳಿಗೆ ಯಾವುದೇ ರೀತಿ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಆಸುಪಾಸಿನ ನಿವಾಸಿಗಳಿಗೆ ಕಿರಿಕಿರಿಯಾಗದಂತೆ ಎಚ್ಚರ ವಹಿಸಬೇಕು ಎಂದೂ ಜಿಲ್ಲಾಡಳಿತ ಸೂಚಿಸಿದೆ.

    ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆಯಿತು. ಧ್ವನಿವರ್ಧಕ ಬಳಕೆಯ ನೆಪ ಹೇಳಿ ರಾತ್ರಿ ವೇಳೆ ಕಂಬಳಕ್ಕೆ ಅಡ್ಡಿಪಡಿಸದಂತೆ ಪೊಲೀಸರಿಗೆ ಸೂಚನೆ ನೀಡಬೇಕು ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯಿಸಿದರು. ರಾತ್ರಿ ವೇಳೆ ನಡೆಯುವ ಜಾತ್ರೆಗಳಿಗೂ ಅಡ್ಡಿಪಡಿಸಬಾರದು ಎಂದು ಶಾಸಕಿ ಭಾಗಿರಥಿ ಮುರುಳ್ಯ ಒತ್ತಾಯಿಸಿದರು. ಯಕ್ಷಗಾನಕ್ಕೆ ಅಡ್ಡಿಪಡಿಸಿ ಜನರ ಧಾರ್ಮಿಕ ನಂಬಿಕೆಗಳಿಗೆ ಚ್ಯುತಿ ಉಂಟುಮಾಡಬೇಡಿ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಕೋರಿದರು.

    ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ದರ್ಶನ್‌ ಎಚ್‌.ವಿ ಜಿಲ್ಲಾಡಳಿತವು ಇಂತಹ ಯಾವುದೇ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಿಲ್ಲ ಎಂದು ಸ್ಪಷ್ಟಪಡಿಸಿದರು. ಅಕ್ಕಪಕ್ಕದವರಿಗೆ ತೊಂದರೆಯಾಗದಂತೆ ಕಂಬಳ, ಯಕ್ಷಗಾನ ಆಯೋಜಿಸಿದರೆ, ಅನುಮತಿ ನೀಡಲು ಅಡ್ಡಿ ಇಲ್ಲ. ಸ್ಥಳೀಯರಿಂದ ದೂರು ಬಂದಾಗ ಮಾತ್ರ ಪೊಲೀಸರು ಕ್ರಮಕೈಗೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ. ತಿಳಿಸಿದರು.

    Post Views: 337

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.