Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮರಳು ಮಾಫಿಯಾಗಳೊಂದಿಗೆ ಶಾಮಿಲು; ಕಂಕನಾಡಿ ನಗರ ಠಾಣೆ ಇನ್ಸ್ ಪೆಕ್ಟರ್ ಭಜಂತ್ರಿ ಸಸ್ಪೆಂಡ್
    ಇತ್ತೀಚಿನ ಸುದ್ದಿ

    ಮರಳು ಮಾಫಿಯಾಗಳೊಂದಿಗೆ ಶಾಮಿಲು; ಕಂಕನಾಡಿ ನಗರ ಠಾಣೆ ಇನ್ಸ್ ಪೆಕ್ಟರ್ ಭಜಂತ್ರಿ ಸಸ್ಪೆಂಡ್

    January 18, 2024
    Share

    ಮಂಗಳೂರು, ಜ.18: ಮರಳು ಮಾಫಿಯಾಗಳೊಂದಿಗೆ ಶಾಮೀಲಾಗಿದ್ದಾರೆ ಮತ್ತು ಮೇಲಧಿಕಾರಿಗಳ ಜೊತೆಗೆ ಉಡಾಫೆಯಾಗಿ ವರ್ತಿಸಿದ್ದಾರೆಂದು ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಎಸ್.ಎಚ್. ಭಜಂತ್ರಿ ಅವರನ್ನು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.

    ಇತ್ತೀಚೆಗೆ ಜಪ್ಪಿನಮೊಗರು ಕಡೆಕಾರಿನಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದಾಗ ಎಸಿಪಿ ಧನ್ಯಾ ನಾಯಕ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ತಲಪಾಡಿ ಗ್ರಾಪಂ ಸದಸ್ಯ, ಕಾಂಗ್ರೆಸ್ ಪುಢಾರಿಗೆ ಸೇರಿದ್ದೆನ್ನಲಾದ ಎಂಟು ಟಿಪ್ಪರ್ ಗಳನ್ನು ಪೊಲೀಸರು ವಶಕ್ಕೆ ಪಡೆದು ಕೇಸು ದಾಖಲಿಸಿದ್ದರು. ಮರಳು ಮತ್ತು ಟಿಪ್ಪರ್ ವಾಹನಗಳನ್ನು ಮುಂದಿನ ತನಿಖೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹಸ್ತಾಂತರ ಮಾಡಿದ್ದರು. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ವ್ಯಾಪಕ ಮರಳುಗಾರಿಕೆ ನಡೆಯುತ್ತಿದ್ದರಿಂದ ಎಸಿಪಿ ಧನ್ಯಾ ನಾಯಕ್ ಕಾರ್ಯಾಚರಣೆ ನಡೆಸಲು ಸೂಚಿಸಿದ್ದರೂ, ಇನ್ಸ್ ಪೆಕ್ಟರ್ ಭಜಂತ್ರಿ ನಿರ್ಲಕ್ಷ್ಯ ವಹಿಸಿದ್ದರು. ಈ ವೇಳೆ, ಭಜಂತ್ರಿಯವರು ತನ್ನ ಮೇಲಧಿಕಾರಿ ಎಸಿಪಿ ಜೊತೆಗೆ ಉಡಾಫೆಯಿಂದ ಮಾತನಾಡಿದ್ದರು ಎನ್ನಲಾಗಿದೆ.

    ಮರಳು ಮಾಫಿಯಾಗಳೊಂದಿಗೆ ಶಾಮೀಲಾಗಿರುವುದು ಮತ್ತು ತನ್ನೊಂದಿಗೆ ಉಡಾಫೆಯಾಗಿ ವರ್ತಿಸಿದ ಬಗ್ಗೆ ಎಸಿಪಿ ಧನ್ಯಾ ನಾಯಕ್, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ವರದಿ ನೀಡಿದ್ದರು. ಇದಲ್ಲದೆ, ಇತ್ತೀಚೆಗೆ ಭಜಂತ್ರಿ ಅವರ ನಿವಾಸದ ಬಳಿಯ ಕೆಲವರು ಪೊಲೀಸ್ ಆಯುಕ್ತರನ್ನು ಭೇಟಿಯಾಗಿ, ತಮ್ಮೊಂದಿಗೆ ದರ್ಪ ತೋರುತ್ತಿದ್ದಾರೆಂದು ಹೇಳಿದ್ದರಂತೆ. ಈ ಬಗ್ಗೆ ಕಮಿಷನರ್ ಪ್ರಶ್ನೆ ಮಾಡಿದಾಗ, ನಾವು ಬದುಕೋದು ಹೇಗೆ ಸ್ವಾಮಿ ಎಂದು ಅವರೊಂದಿಗೂ ಸೋಗಿನ ಮಾತುಗಳನ್ನಾಡಿದ್ದರು ಎನ್ನಲಾಗುತ್ತಿದೆ.ಈ ಹಿಂದೆ ಕೂಡ ಹಲವಾರು ಬಾರಿ ಸಾರ್ವಜನಿಕ ವಲಯದಲ್ಲಿ ದೂರು ಕೇಳಿ ಬರುತಿತ್ತು& ಭಜಂತ್ರಿ ಈ ಹಿಂದೆ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿದ್ದಾಗಲೂ ಮೇಲಧಿಕಾರಿಗಳ ಜೊತೆಗೆ ಉಡಾಫೆಯಿಂದ ವರ್ತಿಸಿ ಸಸ್ಪೆಂಡ್ ಆಗಿದ್ದರು.

    ಸ್ಪೀಕರ್ ಯುಟಿ ಖಾದರ್ ಆಪ್ತನಾಗಿರುವ ಕಾಂಗ್ರೆಸ್ ಪುಢಾರಿ ಕೊಣಾಜೆ, ಉಳ್ಳಾಲ ಭಾಗದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದು ಪೊಲೀಸರಿಗೆ ಮಾಹಿತಿಯಿದ್ದರೂ ನಿರ್ಲಕ್ಷ್ಯ ವಹಿಸಿದ್ದರು. ಈ ಹಿಂದೊಮ್ಮೆ ತಲಪಾಡಿಯಲ್ಲಿ ವೈಭವದ ಇಸ್ಪೀಟ್ ಜೂಜಾಟ ನಡೆಯುವಲ್ಲಿಗೆ ಪೊಲೀಸರು ದಾಳಿ ನಡೆಸಿದ್ದರು. ಎಂಟು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದರೂ, ಪ್ರಮುಖ ಆರೋಪಿಯಾಗಿದ್ದ ಈ ಪುಢಾರಿ ಪರಾರಿಯಾಗಿದ್ದ. ಇದೀಗ ಮರಳುಗಾರಿಕೆಯಲ್ಲಿ ಆತನದ್ದೇ ಕೈವಾಡ ಎಂದು ಹೇಳುತ್ತಿದ್ದರೂ, ಪೊಲೀಸರು ಆ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಿಲ್ಲ.

    Post Views: 222

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.