Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣಭಾರತದಾದ್ಯಂತ ಸದ್ದು ಮಾಡುತ್ತಿರುವ ” ಕಾಂತಾರ” ಸಿನಿಮಾ
    ಇತ್ತೀಚಿನ ಸುದ್ದಿ

    ದಕ್ಷಿಣಭಾರತದಾದ್ಯಂತ ಸದ್ದು ಮಾಡುತ್ತಿರುವ ” ಕಾಂತಾರ” ಸಿನಿಮಾ

    October 2, 2022
    Share

    ಮಂಗಳೂರು; ಸದ್ಯ ದಕ್ಷಿಣಭಾರತದಾದ್ಯಂತ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಕಾಂತಾರ. ಸಿನಿಮಾ ನೋಡಿದ ಮಂದಿಯ ಬಾಯಲ್ಲಿ ಬರೀ ಅದರದ್ದೇ ಮಾತು. ಅಪ್ಪಟ ಕರಾವಳಿ ಸೊಗಡಿನ ಈ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಹೊಸ ಜಾದು ಮಾಡಿದೆ.

    ದೈವಾರಾಧನೆ, ಕಂಬಳ, ಕರಾವಳಿಯ ಸಂಸ್ಕೃತಿಯ ಸುತ್ತ ಸುತ್ತುವ ಈ ಸಿನಿಮಾ ಕನ್ನಡ ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆಯೋದರಲ್ಲಿ ಯಾವುದೇ ಸಂದೇಹವಿಲ್ಲ. ರಿಷಭ್ ಶೆಟ್ಟಿ ಈ ಸಿನಮಾದ ಮೂಲಕ ಪ್ರೇಕ್ಷಕರನ್ನು ಹೊಸ ಲೋಕಕ್ಕೆ ಕರೆದೊಯ್ದಿದ್ದಾರೆ.

    ಇನ್ನು ಕಾಂತಾರ ಸಿನಿಮಾದ ಕ್ಲೈಮಾಕ್ಸ್‌ ಒಬ್ಬ ಪ್ರೇಕ್ಷಕನನ್ನು ಎಷ್ಟರ ಮಟ್ಟಿಗೆ ಆವರಿಸಿಕೊಳ್ಳುತ್ತದೆ ಎನ್ನುವುದಕ್ಕೆ ಮಂಗಳೂರಿನಲ್ಲಿ ನಡೆದ ವಿಶೇಷ ಘಟನೆಯೊಂದು ಸಾಕ್ಷಿಯಾಗಿದೆ. ಮಂಗಳೂರಿನ ಪಿವಿಆರ್ ಚಿತ್ರಮಂದಿರದಲ್ಲಿ ಶುಕ್ರವಾರ ನಾಲ್ಕನೇ ಶೋನಲ್ಲಿ ‘ಕಾಂತಾರ’ ಸಿನಿಮಾ ವೀಕ್ಷಿಸುತ್ತಿದ್ದ ಪ್ರೇಕ್ಷಕನ ಮೈ ಮೇಲೆ ದೈವ ಆವಾಹನೆ ಆಗಿದೆ. ಸಿನಿಮಾ ನೋಡುತ್ತಿದ್ದ ವ್ಯಕ್ತಿ ಏಕಾಏಕಿ ದೈವ ಆವಾಹನೆ ಆದಂತೆ ವರ್ತಿಸಿದ್ದು, ಸ್ಥಳದಲ್ಲಿದ್ದವರು ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಪ್ರೇಕ್ಷನ ವರ್ತನೆ ಕಂಡು ಜನ ಗಾಬರಿಗೊಂಡಿದ್ದಾರೆ. ಈ ವೇಳೆ ಕೂಡಲೇ ಸಿನಿಮಾವನ್ನು ಸ್ಥಗಿತಗೊಳಿಸಲಾಗಿತ್ತು. ಸುಮಾರು 10 ನಿಮಿಷದ ಬಳಿಕ ವ್ಯಕ್ತಿ ಚೇರಿಸಿಕೊಂಡಿದ್ದು ಮತ್ತೆ ಸಿನಿಮಾ ಮುಂದುವರಿಸಲಾಗಿದೆ.

    Post Views: 262

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.