ವಿಟ್ಲ : ಕನ್ಯಾನ ಬಂಡಿತ್ತಡ್ಕದ ರಹ್ಮಾನಿಯ್ಯ ಎಜುಕೇಶನ್ ಟ್ರಸ್ಟ್ ಇದರ ಅದೀನದ ಎಕ್ಸಲೆಂಟ್ ಪಬ್ಲಿಕ್ ಸ್ಕೂಲ್ ಇದರ ನೂತನ ಶಾಲಾ ಕಟ್ಟಡ ಶುಕ್ರವಾರ ಉದ್ಘಾಟನೆಗೊಂಡಿತು.
ಕನ್ಯಾನ ಜಮಾಅತ್ ಖಾಝಿ ಸಯ್ಯದ್ ಫಝಲ್ ಕೊಯಮ್ಮ ತಂಙಳ್ ಕೂರತ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುದರ್ರಿಸ್ ಇಬ್ರಾಹಿಂ ಫೈಝಿ ಕನ್ಯಾನ. ಜಮಾಅತ್ ಕಮಿಟಿ ಅಧ್ಯಕ್ಷ ಇಸ್ಮಾಯಿಲ್ ಹಾಜಿ ಬಾಳ್ತ್ರೊಡಿ, ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಎಂ.ಕೆ. ಮಹಮ್ಮದ್ ಕುಂಞಿ ಹಾಜಿ, ಜಮಾಅತ್ ಕಮಿಟಿ ಪದಾಧಿಕಾರಿಗಳು, ಟ್ರಸ್ಟ್ ನ ಸದಸ್ಯರು ಹಾಗೂ ಜಮಾಅತರು ಉಪಸ್ಥಿತರಿದ್ದರು.