Facebook Twitter Instagram
    Saturday, September 5
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ
    ಇತ್ತೀಚಿನ ಸುದ್ದಿ

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    Share

    ಕಾಸರಗೋಡು: ಕರ್ನಾಟಕ ಮೂಲದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

    ಮೃತರನ್ನು ರಮೇಶ್ (42) ಎಂದು ಗುರುತಿಸಲಾಗಿದೆ. ಹೊಸಂಗಡಿಯ ನರಸಿಂಹಮೂರ್ತಿ ಅವರಿಗೆ ಸೇರಿದ ಹಳೆಯ ಮನೆಯೊಂದರಲ್ಲಿ ಶುಕ್ರವಾರ ರಾತ್ರಿ ರಮೇಶ್ ಅವರ ಮೃತದೇಹ ಪತ್ತೆಯಾಗಿದ್ದು, ತಲೆಗೆ ಗಂಭೀರ ಗಾಯಗಳಾಗಿದ್ದವು.

    ಮದ್ಯಪಾನದ ವೇಳೆ ನಡೆದ ಜಗಳವೇ ಸಾವಿಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಪೊಲೀಸರು ಇದನ್ನು ಕೊಲೆ ಪ್ರಕರಣವೆಂದು ಶಂಕಿಸಿದ್ದಾರೆ.

    ದಿನ ಕೂಲಿ ಕೆಲಸ ಮುಗಿಸಿ ಕ್ವಾರ್ಟರ್ಸ್‌ಗೆ ಹಿಂದಿರುಗಿದ ಇತರ ಕಾರ್ಮಿಕರು ರಮೇಶ್ ಅವರು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಮೇಶ್ ಅವರು ಆ ಕ್ವಾರ್ಟರ್ಸ್‌ನಲ್ಲಿ ಶಾಶ್ವತವಾಗಿ ವಾಸಿಸುತ್ತಿರಲಿಲ್ಲ ಎಂದು ತಿಳಿದುಬಂದಿದೆ.

    ಘಟನಾ ಸ್ಥಳದಿಂದ ಇಬ್ಬರು ವ್ಯಕ್ತಿಗಳು ಪರಾರಿಯಾಗುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ ಎನ್ನಲಾಗಿದ್ದು, ಅವರಿಗಾಗಿ ಮಂಜೇಶ್ವರ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

    ಮರಣೋತ್ತರ ಪರೀಕ್ಷೆ ಹಾಗೂ ಪ್ರಕರಣದ ತನಿಖೆ ಪೂರ್ಣಗೊಂಡ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 1

    Related Posts

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣ- ಕೇರಳದ ಬದಿಯಡ್ಕದಲ್ಲಿ ಆರೋಪಿಯ ಬಂಧನ

    September 5, 2026

    ಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    September 5, 2026

    ಉಪ್ಪಿನಂಗಡಿ: ವಾಹನಗಳ ಡೀಸೆಲ್ ಕಳವು..!! ಇಬ್ಬರ ಬಂಧನ

    September 4, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣ- ಕೇರಳದ ಬದಿಯಡ್ಕದಲ್ಲಿ ಆರೋಪಿಯ ಬಂಧನ

    September 5, 2026

    ಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.