Facebook Twitter Instagram
    Thursday, October 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ದೂರು ನೀಡಿದ ದ್ವೇಷದಿಂದ ಬೆಂಕಿ ಹಚ್ಚಿದ ದುಷ್ಕರ್ಮಿ; ಯುವತಿ ಸಾವು
    ಕರಾವಳಿ ಸುದ್ದಿ

    ದೂರು ನೀಡಿದ ದ್ವೇಷದಿಂದ ಬೆಂಕಿ ಹಚ್ಚಿದ ದುಷ್ಕರ್ಮಿ; ಯುವತಿ ಸಾವು

    April 15, 2025
    Share

    ಕಾಸರಗೋಡು: ಪೊಲೀಸರಿಗೆ ದೂರು ನೀಡಿದ ದ್ವೇಷದಿಂದ ದುಷ್ಕರ್ಮಿಯೋರ್ವ ಯುವತಿಗೆ ಬೆಂಕಿ ಹಚ್ಚಿದ್ದ, ಪರಿಣಾಮ ಗಂಭೀರ ಸುಟ್ಟ ಗಾಯಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತಪಟ್ಟ ಘಟನೆ ಬೇಡಡ್ಕದಲ್ಲಿ ನಡೆದಿದೆ.

    ಬೇಡಡ್ಕದ ರಮಿತಾ (22) ಮೃತಪಟ್ಟ ಯುವತಿ. ಬೇಡಡ್ಕ ಮನ್ನಡ್ಕ ಎಂಬಲ್ಲಿ ಅವರು ಅಂಗಡಿ ನಡೆಸುತ್ತಿದ್ದರು.ಏಪ್ರಿಲ್ 8 ರಂದು ಈ ಘಟನೆ ನಡೆದಿತ್ತು. ಸಮೀಪದ ಪೀಠೋಪಕರಣ ಮಳಿಗೆ ಮಾಲಕ ತಮಿಳುನಾಡು ಮೂಲದ ರಾಮಕೃತ (57) ಎಂಬಾತ ಈ ಕೃತ್ಯ ಎಸಗಿದ್ದನು.ಪಾನಮತ್ತನಾಗಿ ಕಿರುಕುಳ ನೀಡಿದ ಬಗ್ಗೆ ರಮಿತಾ ಪೊಲೀಸರಿಗೆ ದೂರು ನೀಡಿದ್ದು, ಇದರಿಂದ ಈತ ಆಕೆಯ ದಿನಸಿ ಅಂಗಡಿಯೊಳಗೆ ನುಗ್ಗಿ ಟಿನ್ನರ್ ಸುರಿದು ಬೆಂಕಿ ಹಚ್ಚಿದ್ದ. ಪರಿಣಾಮ ಯುವತಿ ಗಂಭೀರ ಸುಟ್ಟ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ರಮಿತಾ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ದಿನಂಪ್ರತಿ ರಾಮಕೃತ ಪಾನಮತ್ತನಾಗಿ ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ರಮಿತಾ ಬೇಡಡ್ಕ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ದೂರು ನೀಡಿದ ವೈಷಮ್ಯದಿಂದ ಏ. 8 ರ ಸಂಜೆ 3 ಗಂಟೆಗೆ ರಮಿತಾ ಅಂಗಡಿಯೊಳಗೆ ನುಗ್ಗಿದ ಈತ ಆಕೆಯ ದೇಹಕ್ಕೆ ಟಿನ್ನರ್ ಸುರಿದು ಬೆಂಕಿ ಹಚ್ಚಿದ್ದನು. ಆ ಬಳಿಕ ಪರಾರಿಯಾಗಲು ಯತ್ನಿಸಿದ್ದ ಆರೋಪಿಯನ್ನು ನಾಗರಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದರು.

    Post Views: 218

    Related Posts

    ಅ.23 ರಂದು ಬನ ತುಳು ಸಿನೆಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

    October 22, 2026

    ನೆಲ್ಯಾಡಿ ಬಳಿ ಭೀಕರ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸಾವು

    October 22, 2026

    ಮಣಿಪಾಲ: ಮಾನವ ಅಸ್ಥಿಪಂಜರದ ಕೆಲವು ಭಾಗಗಳು ಪತ್ತೆ!!

    October 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಅ.23 ರಂದು ಬನ ತುಳು ಸಿನೆಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

    October 22, 2026

    ನೆಲ್ಯಾಡಿ ಬಳಿ ಭೀಕರ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸಾವು

    October 22, 2026

    ಮಣಿಪಾಲ: ಮಾನವ ಅಸ್ಥಿಪಂಜರದ ಕೆಲವು ಭಾಗಗಳು ಪತ್ತೆ!!

    October 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.