Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು: ಭೀಕರ ಕಾರು ಅಪಘಾತ- ಓರ್ವ ಸಾವು, ಮೂವರಿಗೆ ಗಂಭೀರ ಗಾಯ
    ಇತ್ತೀಚಿನ ಸುದ್ದಿ

    ಕಾಪು: ಭೀಕರ ಕಾರು ಅಪಘಾತ- ಓರ್ವ ಸಾವು, ಮೂವರಿಗೆ ಗಂಭೀರ ಗಾಯ

    August 23, 2025
    Share

    ಕಾಪು: ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದ ವೇಳೆ ಕಾರು ಪಲ್ಟಿಯಾದ ಪರಿಣಾಮ ಓರ್ವ ಸಾವನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮೂಳೂರು ಸಮೀಪದ ಹಳ್ಳಿ ಮನೆ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ ನಡೆದಿದೆ.

    ಮೃತರನ್ನು ಬೆಳ್ಮಣ್ ನ ಮಾರ್ವಿನ್ ಮೆಂಡೊನ್ಸಾ ಎಂದು ಗುರುತಿಸಲಾಗಿದೆ.

    ಸಿನಿಮಾಟೋಗ್ರಾಫರ್ ಆಗಿದ್ದ ಮರ್ವಿನ್ ಡಿ ಜೆ ವೃತ್ತಿಯನ್ನು ಮಾಡುತ್ತಿದ್ದರು. ಗಾಯಾಳುಗಳಾದ ಕಾರು ಚಾಲಕ ಅಂಬಲಪಾಡಿಯ ಪ್ರಜ್ವಲ್, ಕಾರ್ಕಳದ ಪ್ರಸಾದ್ ಮತ್ತು ವಿಘ್ನೇಶ್ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಕಾರಿನಲ್ಲಿ ಅಂಬಲಪಾಡಿಯಿಂದ ಬೆಳ್ಮಣ್ ಗೆ ಹೋಗುತ್ತಿದ್ದಾಗ ನಾಯಿಯೊಂದು ಕಾರಿಗೆ ಅಡ್ಡ ಬಂದಿದೆ ಎನ್ನಲಾಗಿದೆ. ಇದರ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದೆ ಎಂದು ತಿಳಿದು ಬಂದಿದೆ.

    ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ತಕ್ಷಣ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಚ್ಚಿಲ ಹಾಗೂ ಮೂಳೂರಿನ ಎಸ್‌ಡಿಪಿಐ ಆಂಬುಲೆನ್ಸ್ ಗಳು ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸಿ ದಾಖಲಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಾರ್ವೀನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ ಆಂಬುಲೆನ್ಸ್ ಚಾಲಕರದ ಕೆ.ಎಂ.ಸಿರಾಜ್, ಹಮೀದ್ ಹಾಗೂ ಸಾಮಾಜಿಕ ಕಾರ್ಯಕರ್ತ ಜಮಾಲುದ್ದೀನ್ ಉಚ್ಚಿಲ ಸಹಕರಿಸಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    ಅಪಘಾತಕ್ಕೆ ಒಂದು ದಿನ ಮೊದಲು, ಮರ್ವಿನ್ ತಮ್ಮ ಹೊಸ ಹಾಡನ್ನು ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಿದ್ದರು, ಅದನ್ನು ಅವರು ಎಪಿಡಿ ಮ್ಯೂಸಿಕ್‌ಗಾಗಿ ನಿರ್ಮಿಸಿ ಸ್ವತಃ ಚಿತ್ರೀಕರಣ ಮಾಡಿದ್ದರು. ಅವರು ಛಾಯಾಗ್ರಾಹಕರಾಗಿ ಹಲವಾರು ಕೊಂಕಣಿ ಮತ್ತು ತುಳು ಚಲನಚಿತ್ರ ಯೋಜನೆಗಳಲ್ಲಿ ಕೆಲಸ ಮಾಡಿದ್ದರು, ತಮ್ಮ ಸೃಜನಶೀಲ ಪ್ರತಿಭೆಯನ್ನು ಹೊಂದಿದ್ದರು.

    Post Views: 142

    Related Posts

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.