Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮನೆಯಲ್ಲಿ ನವಿಲುಗರಿ ಇಟ್ಟುಕೊಳ್ಳುವುದು ಕೂಡಾ ಶಿಕ್ಷಾರ್ಹ ಅಪರಾಧ – ದಂಡದ ಜೊತೆ ಜೈಲು
    ಇತ್ತೀಚಿನ ಸುದ್ದಿ

    ಮಂಗಳೂರು: ಮನೆಯಲ್ಲಿ ನವಿಲುಗರಿ ಇಟ್ಟುಕೊಳ್ಳುವುದು ಕೂಡಾ ಶಿಕ್ಷಾರ್ಹ ಅಪರಾಧ – ದಂಡದ ಜೊತೆ ಜೈಲು

    October 27, 2023
    Share

    ಮಂಗಳೂರು:  ಬಿಗ್ ಬಾಸ್ ಸ್ಪರ್ಧಿಯೊಬ್ಬರು ಹುಲಿ ಉಗುರಿನ ಪೆಂಡೆಂಟ್ ಹಾಕಿಕೊಂಡು ಅರೆಸ್ಟ ಆದ ಬಳಿಕ ಇದೀಗ ಅರಣ್ಯ ಸಂರಕ್ಷಣಾ ಕಾಯಿದೆಯ ಬಗ್ಗೆ ಜನರಿಗೆ ಕುತೂಹಲ ಮೂಡಲಾರಂಭಿಸಿದೆ. ಈ ಬಗ್ಗೆ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ಕೂಡ ಜನರಿಗೆ ಅರಣ್ಯ ಕಾಯಿದೆ ಬಗ್ಗೆ ಅರಿವು ಮೂಡಿಸುವ ಅಗತ್ಯ ಇದೆ ಎಂದು ಹೇಳಿದ್ದಾರೆ. ಈ ನಡುವೆ ಹುಲಿ ಉಗುರು ಅಲ್ಲದೆ ಮನೆಯಲ್ಲಿ ನವೀಲು ಗರಿ ಇಟ್ಟುಕೊಳ್ಳುವುದು ಕೂಡ ಅರಣ್ಯ ಸಂರಕ್ಷಣಾ ಕಾಯಿದೆ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ.

    ಒಂದು ಹುಲಿ ಉಗುರಿನ ಪೆಂಡೆಂಟ್ ಇದೀಗ ರಾಜ್ಯದಲ್ಲಿ ಭಾರೀ ಸದ್ದನ್ನು ಮಾಡಿದ್ದು, ಬಿಗ್ ಬಾಸ್ ಸ್ಪರ್ಧಿ ಅರೆಸ್ಟ್ ಆದ ಬೆನ್ನಲ್ಲೇ ಇದೀಗ ಹಲವು ನಟರು ರಾಜಕರಾಣಿಗಳಿಗೆ ಸಂಕಷ್ಟ ತಂದೊಡ್ಡಿದೆ.

    ಹಾಗೆಯೇ ವನ್ಯಜೀವಿ ನವಿಲು ಸಾಕುವುದೂ ಅಪರಾಧ. ನವಿಲಿನ ಗರಿಯನ್ನೂ ಇಟ್ಟುಕೊಳ್ಳುವಂತಿಲ್ಲ. ಅರಣ್ಯದಂಚಿನ ಗ್ರಾಮದಲ್ಲಿದ್ದು, ನವಿಲು ಜನರ ಮನೆಯ ಆವರಣಕ್ಕೆ ಸ್ವ ಇಚ್ಛೆಯಿಂದ ಬಂದರೆ ಅಡ್ಡಿಯಿಲ್ಲ. ಆದರೆ, ಅದನ್ನು ಜನ ಸಾಕುವಂತಿಲ್ಲ . 1972ರ ವನ್ಯಜೀವಿ ಕಾಯ್ದೆ ವನ್ಯಜೀವಿ ವಸ್ತುಗಳ ಸಂಗ್ರಹ, ಪ್ರದರ್ಶನ ನಿಷೇಧಿಸಿತು. ಬಳಿಕ, 2006, 2012 ಹಾಗೂ 2022ರ ವನ್ಯಜೀವಿ ಕಾಯ್ದೆ ಇನ್ನಷ್ಟು ಬಲಿಷ್ಠವಾಗಿವೆ.

    ಇದೀಗ ವನ್ಯಜೀವಿಗಳ ಸಂರಕ್ಷಣಾ ಕಾಯಿದೆ 1972ರ ಪ್ರಕಾರ ವನ್ಯಜೀವಿಗಳ ಅಂಗಾಂಗ, ಅವಶೇಷಗಳ ಮಾರಾಟ ಅಥವಾ ಬಳಕೆಗೆ ಸಂಪೂರ್ಣ ನಿಷೇಧವಿದೆ. ಯಾವುದೇ ಜೀವಿಯನ್ನು ಜೀವಂತವಾಗಿ ಅಥವಾ ಮೃತಪಟ್ಟ ಬಳಿಕ ಮಾರಾಟ ಮಾಡುವಂತಿಲ್ಲ. ಕಾಡು ಪ್ರಾಣಿಗಳ ಚರ್ಮವನ್ನು ಹದ ಮಾಡಿ ಅಲಂಕಾರಿಕ ವಸ್ತುಗಳಾಗಿ ಬಳಸುವಂತಿಲ್ಲ. ವನ್ಯಜೀವಿಗಳ ಮಾಂಸ ಮಾರಾಟ ಹಾಗೂ ಭಕ್ಷಣೆ ಸಹ ಅಪರಾಧ. ಹಾವಿನ ವಿಷವನ್ನೂ ಸಂಗ್ರಹ ಮಾಡುವಂತಿಲ್ಲ. ನವಿಲು ಗರಿಗಳನ್ನೂ ಸಂಗ್ರಹಿಸುವಂತಿಲ್ಲ. ವನ್ಯಜೀವಿಗಳ ಕೂದಲು, ಚರ್ಮ, ಉಗುರು, ಗೊರಸು, ಹಲ್ಲು, ಆನೆ ದಂತ ಸೇರಿದಂತೆ ದೇಹದ ಯಾವುದೇ ಭಾಗವನ್ನು ಸಂಗ್ರಹಿಸುವುದು, ಸಾಗಿಸುವುದು, ಮಾರಾಟ ಮಾಡುವುದು ಹಾಗೂ ಬಳಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ.

    Post Views: 254

    Related Posts

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.