Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಖೋಟಾನೋಟು ಚಲಾವಣೆಗೆ ಯತ್ನ – ಮಹಿಳೆ ಸಹಿತ ಇಬ್ಬರು ಅರೆಸ್ಟ್
    ಇತ್ತೀಚಿನ ಸುದ್ದಿ

    ಬಂಟ್ವಾಳ: ಖೋಟಾನೋಟು ಚಲಾವಣೆಗೆ ಯತ್ನ – ಮಹಿಳೆ ಸಹಿತ ಇಬ್ಬರು ಅರೆಸ್ಟ್

    May 13, 2024
    Share

    ಬಂಟ್ವಾಳ: ಖೋಟಾನೋಟು ಚಲಾವಣೆಗೆ ಯತ್ನಿಸುತ್ತಿದ್ದ ಕಾಸರಗೋಡು ಮೂಲದ ಮಹಿಳೆ ಹಾಗೂ ಓರ್ವ ಪುರುಷನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಓರ್ವ ಪರಾರಿಯಾಗಿದ್ದಾನೆ. ಬಂಧಿತರಿಂದ 500 ರೂ. ಮುಖಬೆಲೆಯ 46 ಖೋಟಾನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾಸರಗೋಡು, ಕೂಡ್ಲು ಗ್ರಾಮದ ಚೂರಿ ಎಂಬಲ್ಲಿನ ನಿವಾಸಿಗಳಾದ ಮೊಹಮ್ಮದ್ ಸಿ.ಎ. (61), ಕಮರುನ್ನೀಸಾ (41) ಬಂಧಿತ ಆರೋಪಿಗಳು. ಶರೀಫ್ ಎಂಬಾತ ಓಡಿ ಪರಾರಿಯಾಗಿದ್ದಾನೆ. ಈತನ ಬಂಧನಕ್ಕೆ ಪೊಲೀಸರು ಬಲೆ ಬಳಸಿದ್ದಾರೆ. ಮೇ 10ರಂದು ರಾತ್ರಿ ಬಂಟ್ವಾಳದ ಬಿ.ಸಿ.ರೋಡ್ ಸೋಮಯಾಜಿ ಆಸ್ಪತ್ರೆಯ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಪರಿಶೀಲನೆ ಮಾಡಲು ತೆರಳಿದ್ದಾರೆ. ಆಗ ಕಾರಿನ ಚಾಲಕ ಸೀಟಿನಲ್ಲಿದ್ದವ ಹಾಗೂ ಇನ್ನೋರ್ವ ವ್ಯಕ್ತಿ ಪರಾರಿಯಾಗಲು ಯತ್ನಿಸಿದ್ದಾರೆ. ಪರಾರಿಯಾಗುತ್ತಿದ್ದವರ ಪೈಕಿ, ಓರ್ವನನ್ನು ಪೊಲೀಸರು ತಮ್ಮ ಖೆಡ್ಡಾಕ್ಕೆ ಕೆಡವಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ‌. ಮತ್ತೋರ್ವನು ಪರಾರಿಯಾಗಿರುತ್ತಾನೆ. ಅಲ್ಲದೆ ಈ ಕಾರಿನಲ್ಲಿ ಓರ್ವ ಮಹಿಳೆಯಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ವಿಚಾರಣೆಯ ವೇಳೆ ಖೋಟಾ ನೋಟುಗಳನ್ನು ವಿನಿಮಯ ಮಾಡಲು ಬಂದಿರುವುದಾಗಿ ತಿಳಿಸಿದ್ದಾರೆ. ಪೊಲೀಸರು ಅವರಿಂದ 500 ರೂಪಾಯಿ ಮುಖ ಬೆಲೆಯ 46 ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಆರೋಪಿಗಳ ಬಳಿಯಿದ್ದ 5,300 ರೂ ನಗದು ಮತ್ತು 3 ಮೊಬೈಲ್ ಗಳನ್ನು ಸ್ವಾಧೀನಪಡಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    Post Views: 178

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.