Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ನಾಲ್ಕು ತಿಂಗಳ ಮಗುವನ್ನು ಕೊಲೆ ಗೈದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡ ತಾಯಿ
    ಇತ್ತೀಚಿನ ಸುದ್ದಿ

    ಕಾಸರಗೋಡು: ನಾಲ್ಕು ತಿಂಗಳ ಮಗುವನ್ನು ಕೊಲೆ ಗೈದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡ ತಾಯಿ

    April 7, 2024
    Share

    ಕಾಸರಗೋಡು: ಇಡುಕ್ಕಿ ತೊಡುಪುಳ ನಿವಾಸಿ ಶರತ್‌ ಅವರ ಪತ್ನಿ ಬಿಂದು (28) ಆತ್ಮಹತ್ಯೆ ಮಾಡಿಕೊಂಡವರು ಅವರ ನಾಲ್ಕು ತಿಂಗಳ ಹೆಣ್ಣು ಮಗುವಿನ ಹೆಸರು ಶ್ರೀನಂದಾ. ಶರತ್‌ ಇಸ್ರೇಲ್‌ನಲ್ಲಿ ಉದ್ಯೋಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

    ಬಿಂದು ತೊಡುಪುಳದಲ್ಲಿರುವ ಪತಿಯ ಮನೆಯಿಂದ ಪುತ್ರಿ ಶ್ರೀನಂದ ಮತ್ತು ಪುತ್ರ ಶ್ರೀಹರಿಯೊಂದಿಗೆ ಕಳೆದ ಆದಿತ್ಯವಾರ ಮುಳಿಯಾರು ಬಳಿಯ ಕೋಪಾಳಕೊಚ್ಚಿಗೆ ಬಂದಿ ದ್ದರು. ಎ. 5ರಂದು ಮಧ್ಯಾಹ್ನ ಬಿಂದು ಮನೆ ಪಕ್ಕದ ಮರದಲ್ಲಿ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿ ಯಲ್ಲಿ ಪತ್ತೆಯಾಗಿದ್ದು, ಅವರ ಕೈಯ ನರ ಕತ್ತರಿಸಲ್ಪಟ್ಟು ರಕ್ತ ಒಸ ರುತ್ತಿತ್ತು. ಇದೇ ವೇಳೆ ಮಗು ಶ್ರೀನಂದ ಮನೆಯ ಮಲಗುವ ಕೊಠಡಿಯಲ್ಲಿ ಗಂಭೀರಾವಸೆœಯಲ್ಲಿ ಕಂಡು ಬಂದಿದ್ದು, ಅದನ್ನು ಕಂಡ ಮನೆಯವರು ಮಗುವನ್ನು ಚೆಂಗಳ ಸಹಕಾರಿ ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಬಿಂದು ಮತ್ತು ಶರತ್‌ ಅವರ ವಿವಾಹ ಆರು ವರ್ಷಗಳ ಹಿಂದೆ ನಡೆದಿತ್ತು.

    ವಿಷಯ ತಿಳಿದ ಕಾಸರಗೋಡು ತಹಶೀಲ್ದಾರ್‌ ಪಿ.ಎಂ.ಅಬೂಬಕ್ಕರ್‌ ಸಿದ್ದಿಕ್‌, ಕಾಸರಗೋಡು ಡಿವೈಎಸ್‌ಪಿ ಜಯನ್‌ ಡೊಮಿನಿಕ್‌ ಹಾಗೂ ಆದೂರು ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂಜಯ್‌ ಕುಮಾರ್‌ ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದ್ದು ಅವರ ನೇತೃತ್ವದಲ್ಲಿ ಮಹಜರು ನಡೆಸಿದ ಬಳಿಕ ಮೃತದೇಹಗಳನ್ನು ಉನ್ನತ ಮಟ್ಟದ ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಗಿದೆ.

    ಸಾವಿಗೆ ಕಾರಣ ಇನ್ನಷ್ಟೇ ತಿಳಿಯ ಬೇಕಿದ್ದು, ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದಾರೆ. ಮೃತ ಬಿಂದು ಅವರ ಪತಿಯ ಮನೆಯವರು, ತವರು ಮನೆಯವರ ಮತ್ತು ಕುಟುಂಬದ ಸದಸ್ಯರ ಹೇಳಿಕೆಗಳನ್ನು ದಾಖಲಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

    Post Views: 192

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.