ಹಾವೇರಿ : ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಪಲ್ಲಕ್ಕಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಬ್ರೇಕ್ ಲೈನ್ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಕ್ಷಣಾರ್ಧದಲ್ಲಿ ಬಸ್‌ಗೆ ವ್ಯಾಪಿಸಿದೆ. ಈ ವೇಳೆ ಸಮಯಪ್ರಜ್ಞೆ ಮೆರೆದ ಚಾಲಕ ಪಕ್ಕೀರಪ್ಪ ಅವರು ತಕ್ಷಣವೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಇದರಿಂದಾಗಿ ಬಸ್ಸಿನಲ್ಲಿದ್ದ ಎಲ್ಲಾ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.




