Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲದಿಂದ ನಾಪತ್ತೆಯಾಗಿದ್ದವನ ಮೃತದೇಹ ಕುಂಬ್ಳೆ ಸಮುದ್ರದಲ್ಲಿ ಪತ್ತೆ.!
    ಇತ್ತೀಚಿನ ಸುದ್ದಿ

    ಉಳ್ಳಾಲದಿಂದ ನಾಪತ್ತೆಯಾಗಿದ್ದವನ ಮೃತದೇಹ ಕುಂಬ್ಳೆ ಸಮುದ್ರದಲ್ಲಿ ಪತ್ತೆ.!

    October 10, 2022
    Share

    ಉಳ್ಳಾಲ: ಕಳೆದ ತಿಂಗಳ 26ರಂದು ಉಳ್ಳಾಲ ಸೋಮೇಶ್ವರ ಕಡಲ ಕಿನಾರೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕಾಸರಗೋಡು ಜಿಲ್ಲೆಯ ಕುಂಬ್ಳೆ ಸಮುದ್ರದಲ್ಲಿ ಪತ್ತೆಯಾಗಿದೆ. ಆದರೆ ಮೂರು‌ ದಿನಗಳ ಬಳಿಕ‌ ಶವದ ಗುರುತು ಪತ್ತೆಯಾಗದೆ ಕೋಸ್ಟ್ ಗಾರ್ಡ್ ಪೊಲೀಸರು ಮೃತದೇಹವನ್ನ ಹೂತು ದಫನ ಮಾಡಿದ್ದು, ಮತ್ತೆ ಮೃತದೇಹವನ್ನ ಕುಟುಂಬಸ್ಥರು ವಶಕ್ಕೆ ಪಡೆಯೋ ಸಾಧ್ಯತೆಗಳಿವೆ.

    ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಿಲಾರು ದಾರಂದ ಬಾಗಿಲು ನಿವಾಸಿ ಝಾಕಿರ್ (36) ಯಾನೆ ಜಾಕಿ ಮೃತ ದುರ್ದೈವಿ. ಝಾಕಿರ್ ವಿವಾಹಿತನಾಗಿದ್ದು, ಈ ಹಿಂದೆ ಮಂಗಳೂರಿನ ಧಕ್ಕೆಯಲ್ಲಿ ಸಹೋದರರ ಜೊತೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದು, ವ್ಯವಹಾರದಲ್ಲಿ ಕೈ ಸುಟ್ಟು ಕೊಂಡಿದ್ದನೆನ್ನಲಾಗಿದೆ. ಝಾಕಿರ್ ಇತ್ತೀಚಿಗೆ ಖಿನ್ನತೆಗೊಳಗಾಗಿದ್ದು ಕಳೆದ ಸೆ.26 ರಂದು ಮನೆಯಿಂದ ಹೊರ ಹೋಗಿದ್ದವ ನಾಪತ್ತೆಯಾಗಿದ್ದ.ಝಾಕಿರ್ ಚಲಾಯಿಸುತ್ತಿದ್ದ ಮೋಟಾರ್ ಬೈಕ್ ಮೊನ್ನೆ ಶುಕ್ರವಾರ ಸೋಮೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರು ನಿನ್ನೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸುವಾಗ ಝಾಕಿರ್ ಮೃತ ದೇಹ ಕುಂಬ್ಳೆಯಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

    ಕಳೆದ ಸೆ.28 ರಂದು ಕುಂಬ್ಳೆಯ ಆಳ ಸಮುದ್ರದಲ್ಲಿ ಝಾಕಿರ್ ಮೃತದೇಹ ಮೀನುಗಾರರಿಗೆ ದೊರಕಿದ್ದು ಕೋಸ್ಟ್ ಗಾರ್ಡ್ ಪೊಲೀಸರು ಕೇಸು ದಾಖಲಿಸಿ ಮಂಗಲ್ಪಾಡಿ ಸರಕಾರಿ ಆಸ್ಪತ್ರೆಯಲ್ಲಿ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.ಕೊಳೆತಿದ್ದ ಮೃತದೇಹದ ಗುರುತು ಪರಿಚಯ ಸಿಗದ ಕಾರಣ ಕೋಸ್ಟ್ ಗಾರ್ಡ್ ಪೊಲೀಸರು ಮೂರು ದಿವಸಗಳ ನಂತರ ಶವವನ್ನ ಹೂತು ದಫನಗೈದಿದ್ದಾರೆ.

    ಝಾಕಿರ್ ಬೈಕ್ ಸೋಮೇಶ್ವರ ದೇವಸ್ಥಾನದ ಬಳಿ ದೊರಕಿದ್ದು ಆತ ಸಮುದ್ರಕ್ಕೆ ಹಾರಿ ಆತ್ಮ ಹತ್ಯೈಗೈದಿರುವ ಶಂಕೆ ವ್ಯಕ್ತವಾಗಿತ್ತು.ಕುಟುಂಬ ವರ್ಗದವರು ಮೃತ ಝಾಕಿರ್ ಮೃತದೇಹವನ್ನ ಮನೆಗೆ ತರಿಸಲು ಸಿದ್ಧತೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಮೃತ ಝಾಕಿರ್‌ಗೆ ಓರ್ವ ಪುತ್ರನಿದ್ದು, ಪತ್ನಿ ಮತ್ತೆ ಗರ್ಭಿಣಿಯಾಗಿದ್ದಾರೆ.

    Post Views: 171

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.