ಬೆಳ್ಳಂ ಬೆಳಗ್ಗೆ ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನ ವಿಕೃತ ಕಾಮಿ ಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ.ನಂತರ ಆಕೆ ತಪ್ಪಿಸಿಕೊಂಡು ಬಂದರೂ ಸಹ ಹಿಂದೆ ಬಂದು ಹಿಂಸೆ ನೀಡಿದ್ದಾನೆ.
ಈ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಗಸ್ಟ್ 02ರ ಬೆಳಗಿನ ಜಾವ ಐದು ಘಂಟೆಗೆ ಕೋಣನಕುಂಟೆ ಬಳಿಯ ಕೃಷ್ಣಾನಗರದಲ್ಲಿ ನಡೆದಿದೆ. ಘಟನೆ ಬಳಿಕ ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಭೇಟಿ ನೀಡಿದ್ದಾರೆ. ಆದರೆ, ಪೊಲೀಸರು ಸರಿಯಾದ ರೀತಿ ಕ್ರಮ ತೆಗೆದುಕೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ ಸಿಲಿಕಾನ್ ಸಿಟಿ ಬೆಂಗಳೂರಿನ ಮಹಿಳೆಯರು ಒಂಟಿಯಾಗಿ ಮನೆಯಿಂದ ಹೊರ ಬರುವಂತೆ ಇಲ್ಲವಾ? ಎಂಬ ಪ್ರಶ್ನೆ ಮೂಡಿದೆ. ಹೌದು, ಬೆಳಗ್ಗೆ 5 ಘಂಟೆ ಸಮಯದಲ್ಲಿ ನಡೆದ ಒಂದು ಘಟನೆ ನಿಜಕ್ಕೂ ಭಯ ಹುಟ್ಟಿಸುತ್ತಿದೆ.