ಕೇಂದ್ರ ಸರ್ಕಾರದಿಂದ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡೋದಕ್ಕಾಗಿ ಲಖ್ ಪತಿ ದೀದಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದಂತ ನಿರ್ಮಲಾ ಸೀತಾರಾಮನ್ ಅವರು, 2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲಖ್ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು.ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದರು.