Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪೊಲೀಸ್ ಅಧಿಕಾರಿ ಹೆಸರಿನಲ್ಲಿ ಬೆದರಿಸಿ ಲಕ್ಷಾಂತರ ರೂ. ವಂಚನೆ..!
    ಇತ್ತೀಚಿನ ಸುದ್ದಿ

    ಮಂಗಳೂರು: ಪೊಲೀಸ್ ಅಧಿಕಾರಿ ಹೆಸರಿನಲ್ಲಿ ಬೆದರಿಸಿ ಲಕ್ಷಾಂತರ ರೂ. ವಂಚನೆ..!

    November 8, 2024
    Share

    ಮಂಗಳೂರು: ಅಪರಚಿತ ವ್ಯಕ್ತಿಯೋರ್ವ ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಕರೆ ಮಾಡಿ ಹಣದ ವ್ಯವಹಾರ ನೆಪದಲ್ಲಿ ಬೆದರಿಕೆ ಹಾಕಿ 30 ಲಕ್ಷ ರೂ. ಹಣವನ್ನು ಆನ್ ಲೈನ್ ಮೂಲಕ ವಂಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಅಕ್ಟೋಬ್ 19 ರಂದು ಅಪರಿಚಿತ ವ್ಯಕ್ತಿ ಮುಂಬೈ ಪೊಲೀಸ್ ಅಧಿಕಾರಿ ಎಂದು ಕರೆ ಮಾಡಿ ‘ನಿಮ್ಮ ಮೊಬೈಲ್ ನಂಬರ್‌ನಲ್ಲಿ ಆನ್‌ಲೈನ್ ವಂಚನೆ ಪ್ರಕರಣ ದಾಖಲಾಗಿದ್ದು, ಮುಂಬೈ ಛತ್ರಪತಿ ಶಿವಾಜಿ ವಿಮಾನ ನಿಲ್ದಾಣದಲ್ಲಿ ಪ್ರಕರಣ ದಾಖಲಾಗಿದೆ.

    ಮುಂಬಯಿ ಸಹರಾ ಠಾಣೆಯಿಂದ ಕರೆ ಮಾಡಿರುವುದಾಗಿ ತಿಳಿಸಿದ್ದಾನೆ. ಅ.19ರಂದು ಬೆಳಗ್ಗೆ 11 ಗಂಟೆಗೆ ವಂಚನೆಗೊಳಗಾದ ವ್ಯಕ್ತಿಗೆ ಮೊಬೈಲ್‌ಗೆ ಪೊಲೀಸ್ ಸಮವಸ್ತ್ರ ಧರಿಸಿದ್ದ ಇನ್ನೊಬ್ಬ ವ್ಯಕ್ತಿ ವಿಡಿಯೊ ಕಾಲ್ ಮಾಡಿ ‘ಎಸ್‌ಬಿಐ ಬ್ಯಾಂಕ್ ಮುಂಬೈನಲ್ಲಿ ವಿವೇಕ್‌ದಾಸ್ ವ್ಯಕ್ತಿ ಅಕೌಂಟ್ ಓಪನ್ ಮಾಡಿ ಮಾನವ ಕಳ್ಳ ಸಾಗಾಣಿಕೆ ಅವ್ಯವಹಾರಗಳನ್ನು ಮಾಡಿದ್ದು, 3.9ಕೋಟಿ ರೂ. ವಂಚನೆ ಮಾಡಿದ್ದಾನೆ.

    ಈತನ ವಿಚಾರಣೆ ವೇಳೆ ಅವ್ಯವಹಾರ ಹಣದಲ್ಲಿ 38ಲಕ್ಷ ರೂ. ಕಮಿಷನ್ ನಿಮಗೆ ನೀಡಿರುತ್ತಾರೆ’ ಎಂದು ಆರೋಪಿಸಿದ್ದಾನೆ. ಇದಕ್ಕೆ ಒಪ್ಪದಿದ್ದಾಗ ನಿಮ್ಮ ಎಲ್ಲಾ ಖಾತೆಗಳನ್ನು ಸ್ಥಗಿತಗೊಳಿಸುವುದಾಗಿ ಬೆದರಿಸಿದ್ದಾನೆ. ಮಾತ್ರವಲ್ಲದೆ ಬಂಧನ ವಾರಂಟ್ ಇರುವುದಾಗಿ ಹೇಳಿದ್ದಾನೆ. ಇದರಿಂದ ಗಾಬರಿಗೊಂಡ ವ್ಯಕ್ತಿ ಹಂತಹಂತವಾಗಿ 30,65,000ರೂ. ಹಣವನ್ನು ವರ್ಗಾವಣೆ ಮಾಡಿರುವುದಾಗಿ ಲಕ್ಷಾಂತರ ರೂಪಾಯಿ ಕಳಕೊಂಡ ದೂರುದಾರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಹೇಳಿದ್ದಾರೆ.

    Post Views: 157

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.