ಬೆಂಗಳೂರು : ಎಲ್ ಇಡಿ (LED) ಬಳಸುವ ವಾಹನ ಸವಾರರಿಗೆ ಸಾರಿಗೆ ಸಚಿವ ಶ್ರೀರಾಮುಲು ಬಿಗ್ ಶಾಕ್ ನೀಡಿದ್ದು, ವಾಹನಗಳಲ್ಲಿ ಎಲ್ ಇಡಿ ದೀಪ ಬಳಸುತ್ತಿರುವ ಸವಾರರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿಯ ವೈ.ಎಂ. ಸತೀಶ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಾಹನಗಳಲ್ಲಿ ಎಲ್ ಇಡಿ ದೀಪ ಬಳಸುತ್ತಿರುವ ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಕಲಂ 177ರಡಿ ಪ್ರಕರಣ ದಾಖಲಿಸಿ 500 ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.
2019 ರಲ್ಲಿ 7,414, 2020 ರಲ್ಲಿ 2,312, 2021 ರಲ್ಲಿ 1,492 ಹಾಗೂ 2022 ರಲ್ಲಿ ಆಗಸ್ಟ್ ವರೆಗೆ 703 ಪ್ರಕರಣಗಳು ದಾಖಲಾಗಿವೆ. ರಸ್ತೆ ಸುರಕ್ಷತೆಗಾಗಿ 295 ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಐಷಾರಾಮಿ ವಾಹನಗಳ ನೋಂದಣಿಯಲ್ಲಿನ ಅಕ್ರಮಗಳು ಮತ್ತು ರಾಜ್ಯದ ಬೊಕ್ಕಸಕ್ಕೆ ಕೋಟಿಗಟ್ಟಲೆ ನಷ್ಟವನ್ನುಂಟುಮಾಡುವ ತೆರಿಗೆ ವಂಚನೆಯ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.