ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.