ಬೆಳ್ತಂಗಡಿ: ಮನೆ ಬಳಿ ಕಟ್ಟಿ ಹಾಕಿದ ಎರಡು ಕರುಗಳನ್ನು ಚಿರತೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಬೆಳ್ತಂಗಡಿಯ ಮುಂಡೂರು ಬಳಿ ಭಾನುವಾರ ರಾತ್ರಿ ನಡೆದಿದೆ.
ಇಲ್ಲಿನ ಮುಂಡೂರು ಗ್ರಾಮದ ಕೇರಿಯಾರ್ ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ಗುರುವಪ್ಪ ಸಾಲ್ಯಾನ್ ಅವರಿಗೆ ಸೇರಿದ ಕರುಗಳನ್ನು ಚಿರತೆ ಕೊಂದು ತಿಂದಿದೆ.
ಮನೆ ಬಳಿಕ ಕಟ್ಟಿ ಹಾಕಿದ್ದ ಕರಿಗಳ ಮೇಲೆ ಭಾನುವಾರ ರಾತ್ರಿ ದಾಳಿ ಮಾಡಿದ ಚಿರತೆ ತೋಟಕ್ಕೆ ಎಳೆದೊಯ್ದು ತಿಂದು ಹಾಕಿದೆ.
ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೇ ಈ ಭಾಗದಲ್ಲಿ ರಾತ್ರಿ ಬಂದ ಚಿರತೆ ಕರುವೊಂದರ ಮೇಲೆ ದಾಳಿ ನಡೆಸಿ ತಿಂದು ಹಾಕಿತ್ತು. ಇದರ ಬಗ್ಗೆಯೂ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು. ಸದ್ಯ ಈ ಭಾಗದಲ್ಲಿ ಮತ್ತೆ ಚಿರತೆ ಸಂಚಾರ ಕಂಡು ಬಂದಿದ್ದು, ಈ ಸಂಬಂಧ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ರಕ್ಷಣೆ ಒದಗಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.