Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡಬಿದರೆ: ಕೊಲೆ ಪ್ರಕರಣ, ಆರೋಪಿಗೆ ಜೀವಾವಧಿ ಶಿಕ್ಷೆ..!!
    ಇತ್ತೀಚಿನ ಸುದ್ದಿ

    ಮೂಡಬಿದರೆ: ಕೊಲೆ ಪ್ರಕರಣ, ಆರೋಪಿಗೆ ಜೀವಾವಧಿ ಶಿಕ್ಷೆ..!!

    November 14, 2025
    Share

    ಮಂಗಳೂರು:ಮೂಡಬಿದಿರೆಯ ಕಾಲೇಜೊಂದರಲ್ಲಿ ಕ್ಯಾಂಟೀನ್‌ ಕೆಲಸ ಮಾಡುತ್ತಿದ್ದ ಚೇತನ್‌ ಎಂಬವರನ್ನು ಕೊಲೆ ಮಾಡಿದ ಆರೋಪಿ ಚಿದಾನಂದ ಪರಶು ನಾಯ್ಕನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.

    ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಿದೆ.ಮೂಡಬಿದಿರೆಯ ಕಾಲೇಜೊಂದರ ಕ್ಯಾಂಟೀನ್‌ನಲ್ಲಿ ಜೊತೆಗೆ ಕೆಲಸ ಮಾಡಿಕೊಂಡಿರುವ ಚೇತನ್ (22) ಮತ್ತು ಚಿದಾನಂದ ಎಂಬವರಿಗೆ ಗೆ ಕ್ಯಾಂಟೀನ್ ನಲ್ಲಿ ಕೆಲಸದ ವಿಚಾರದಲ್ಲಿ ಮತ್ತು ವೈಯುಕ್ತಿಕ ವಿಚಾರದಲ್ಲಿ ಪರಸ್ಪರ ತಕರಾರು ನಡೆದಿತ್ತು.

    ಆರೋಪಿ ಚಿದಾನಂದ ಪರಶು ನಾಯ್ಕ ಎಂಬಾತನು 2020 ರ ಅ. 10 ರಂದು ಮಧ್ಯರಾತ್ರಿ ಚೇತನ್‌ನನ್ನು ಕೊಲೆ ಮಾಡುವ ಉದ್ದೇಶದಿಂದ ಕಬ್ಬಿಣದ ರಾಡ್‌ ಹಿಡಿದುಕೊಂಡು ಚೇತನ್‌ ವಿಶಾಂತ್ರಿ ಕೊಠಡಿಗೆ ಅಕ್ರಮ ಪ್ರವೇಶ ಮಾಡಿದ್ದನು. ಅಲ್ಲಿ ರಾಜೇಶ್‌ ಪೂಜಾರಿ ಮತ್ತು ಶಂಕ್ರಪ್ಪ ಜತೆ ನಿದ್ರಿಸುತ್ತಿದ್ದ ಚೇತನ್‌ನನ್ನು ಅವಾಚ್ಯ ಶಬ್ದಗಳಿಂದ ಬೈದು ರಾಡ್‌ನಿಂದ ತಲೆಗೆ, ಮುಖಕ್ಕೆ ಹಲ್ಲೆ ಮಾಡಿದ್ದಲ್ಲದೇ ಮೊಬೈಲ್‌ ಫೋನ್‌ ಜಖಂಗೊಳಿಸಿದ್ದ.

    ಗಂಭೀರ ಗಾಯಗೊಂಡಿದ್ದ ಚೇತನ್‌ ನ. 9 ರಂದು ಮೃತಪಟ್ಟಿದ್ದರು. ಈ ಬಗ್ಗೆ ಮೂಡುಬಿದಿರೆ ರಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ತನಿಖೆ ನಡೆಸಿದ ಅಂದಿನ ಪೊಲೀಸ್‌ ನಿರೀಕ್ಷ ಬಿ.ಎಸ್‌ ದಿನೇಶ್ ಕುಮಾರ್‌ ಆರೋಪಿತನ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿದ್ದರು.

    ನ 1 ರಂದು ಆತನನ್ನು ಬಂಧಿಸಲಾಗಿದ್ದು ನ್ಯಾಯಾಂಗ ಬಂಧನದಲ್ಲಿದ್ದು. ಪ್ರಕರಣದಲ್ಲಿ 40 ಸಾಕ್ಷಿದಾರರನ್ನು ವಿಚಾರಣೆ ಮಾಡಲಾಗಿದ್ದು, ಇಂದು ಮಂಗಳೂರಿನ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ ವಿ,ಎನ್‌ ಅವರು ಜೀವಾವಧಿ ಶಿಕ್ಷೆಯನ್ನು ವಿಧಿಸಿದರು.

    Post Views: 138

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.