Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಶರಣ್ ಪಂಪ್ ವೆಲ್ ಮತ್ತು ಭರತ್ ಕುಂಮ್ಡೆಲ್ ಗೆ ಜೀವ ಬೆದರಿಕೆ..!!
    ಇತ್ತೀಚಿನ ಸುದ್ದಿ

    ಮಂಗಳೂರು: ಶರಣ್ ಪಂಪ್ ವೆಲ್ ಮತ್ತು ಭರತ್ ಕುಂಮ್ಡೆಲ್ ಗೆ ಜೀವ ಬೆದರಿಕೆ..!!

    May 4, 2025
    Share

    ಮಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್‌ ಸುಹಾಸ್‌ ಶೆಟ್ಟಿ  ಮೇ 1ರಂದು ಕೊಲೆಯಾಗಿದ್ದ. ಈ ಪ್ರಕರಣವನ್ನ ಬೇಧಿಸಿರುವ ಪೊಲೀಸರು ಇಬ್ಬರು ಹಿಂದೂಗಳು ಸೇರಿದಂತೆ 8 ಜನ ಆರೋಪಿಗಳನ್ನ ಬಂಧಿಸಿದ್ದಾರೆ. ಈಗಲೂ ಕರಾವಳಿ ಭಾಗದಲ್ಲಿ ಬೂದಿ ಮುಚ್ಚಿದ ಕೆಂಡದಂಥಾ ಸ್ಥಿತಿಯಿದೆ. ಈ ಮಧ್ಯೆ ಮಂಗಳೂರಿನಲ್ಲಿ ಹಿಂದೂ ಮುಖಂಡರಿಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ  ಹಾಕಲಾಗುತ್ತಿದೆ. ಮುಂದಿನ ಟಾರ್ಗೆಟ್ ಶರಣ್​ ಪಂಪ್​ವೆಲ್​ ಮತ್ತು ಭರತ್ ಕುಮ್ಡೇಲ್​ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ ಮಾಡಲಾಗಿದೆ. ಮೇ 5ರಂದು ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಕೊಲ್ಲುವುದಾಗಿ ಕಿಡಿಗೇಡಿಗಳು ಹಿಂದೂ ಮುಖಂಡ ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಹಾಕಿದ್ದು, ಪೋಸ್ಟ್ ವೈರಲ್ ಮಾಡಿದ್ದಾರೆ. ಭರತ್ ಕುಮ್ಡೇಲ್​​ ಎಸ್​​ಡಿಪಿಐ ಮುಖಂಡ ಅಶ್ರಫ್ ಹತ್ಯೆಯ ಪ್ರಮುಖ ಆರೋಪಿ.

     

    ಎಸ್​​ಡಿಪಿಐನಲ್ಲಿ ಮುಂಚೂಣಿಯಲ್ಲಿದ್ದ ಮುಖಂಡ ಅಶ್ರಫ್ ಕಲಾಯಿ ಅನ್ನು 2017ರ ಜೂನ್ 21ರಂದು ಬಂಟ್ವಾಳದ ಬೆಂಜನಪದವು ಎಂಬಲ್ಲಿ ಬರ್ಬರವಾಗಿ ಹತ್ಯೆಗೈದಿದ್ದರು. ಅಶ್ರಫ್ ಕೊಲೆ ಬಳಿಕ ಪ್ರತೀಕಾರವಾಗಿ ಶರತ್ ಮಡಿವಾಳ ಹತ್ಯೆಯಾಗಿತ್ತು. ಅಶ್ರಫ್ ಕೊಂದ ಭರತ್​​ ನನ್ನ ಮರೆತಿಲ್ಲ. Wait and watch ಎಂದು ಕೇವಲ ಎಂಟು ಗಂಟೆ ಮೊದಲು On fixed leader ಎಂಬ ಹೆಸರಿನ ಇನ್​​ಸ್ಟಾಗ್ರಾಂ ಪೇಜ್​ನಲ್ಲಿ ಮತ್ತೊಂದು ಪೋಸ್ಟ್ ಹಂಚಿಕೊಳ್ಳಲಾಗಿದೆ.

    ಶರಣ್ ಪಂಪ್​ವೆಲ್​ಗೂ ಜೀವ ಬೆದರಿಕೆ

    ಭರತ್ ಕುಮ್ಡೇಲ್​ ಮಾತ್ರವಲ್ಲದೇ ವಿಶ್ವ ಹಿಂದೂ ಪರಿಷತ್​ ಮುಖಂಡ ಶರಣ್ ಪಂಪ್​ವೆಲ್​​ಗೂ ಜೀವ ಬೆದರಿಕೆ ಹಾಕಲಾಗಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್​ವೆಲ್, ಶರಣ್ ಹತ್ಯೆಯಾಗಲು ತಯಾರಾಗಿರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿದೆ. ಅದೇ ರೀತಿಯಾಗಿ ಶ್ರೀಜಿತ್ ಅಲಿಯಾಸ್ ಶ್ರೀಜುಗೂ ಜೀವ ಬೆದರಿಕೆ ಹಾಕಲಾಗಿದೆ. ‘Killers_target’ ಎಂಬ ಪೇಜ್​​ನಿಂದ ಮುಂಚೆ ಪೋಸ್ಟ್​ ಹಾಕಲಾಗಿತ್ತು. ಇಂದು ಮತ್ತೆ ವೈಯಕ್ತಿಕವಾಗಿ ‘Abu_Sifiyan678’ ಪೇಜ್​​ನಿಂದ ಮೆಸೇಜ್ ಕಳುಹಿಸಿರುವ ಕಿಡಿಗೇಡಿಗಳು, ‘ಎಲ್ಲಿದೀಯಾ ನೀನು, ನೆಕ್ಸ್ಟ್ ನೀನೆ’ ಅಂತಾ ಮಲಯಾಳಂ ನಲ್ಲಿ ಮೆಸೇಜ್ ಮಾಡಿದ್ದಾರೆ.

     

    ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಪ್ರತಿಕಾರಕ್ಕೆ 2018ರ ಜನವರಿಯಲ್ಲಿ ಬಶೀರ್​ ಕೊಲೆ ಆಗಿತ್ತು. ಮಂಗಳೂರಿನ ಹೊರವಲಯ ಕೊಟ್ಟಾರ ಚೌಕಿ ಬಳಿ ಹತ್ಯೆ ಮಾಡಲಾಗಿತ್ತು. ಕೇರಳದ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ ಶ್ರೀಜಿತ್ ಅಲಿಯಾಸ್ ಶ್ರೀಜು ಪ್ರಕರಣದ ಆರೋಪಿ. ಹೀಗಾಗಿ ಈತನಿಗೆ ಮತ್ತೆ ಮತ್ತೆ ಕೊಲೆ ಬೆದರಿಕೆ ಹಾಕಲಾಗುತ್ತಿದೆ.

    Post Views: 381

    Related Posts

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.