Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಕಾರಿಗೆ ಡಿಕ್ಕಿಯಾದ ನಾಯಿ ಬಂಪರ್‌ನಲ್ಲಿ ಪ್ರತ್ಯಕ್ಷ
    ಇತ್ತೀಚಿನ ಸುದ್ದಿ

    ಪುತ್ತೂರು: ಕಾರಿಗೆ ಡಿಕ್ಕಿಯಾದ ನಾಯಿ ಬಂಪರ್‌ನಲ್ಲಿ ಪ್ರತ್ಯಕ್ಷ

    February 3, 2023
    Share

    ಪುತ್ತೂರು: ಕಾರಿಗೆ ಡಿಕ್ಕಿಯಾದ ನಾಯಿ ಕಾರ್‌ನ ಬಂಪರಿನೊಳಗೆ ಪ್ರತ್ಯಕ್ಷವಾದ ಘಟನೆ ಪುತ್ತೂರು ನಲ್ಲಿ ನಡೆದಿದೆ. ಬಂಪರಿನೊಳಗೆ ಸಿಲುಕಿಕೊಂಡಿದ್ದ ಈ ನಾಯಿ ಸುಮಾರು 70 ಕಿಲೋಮೀಟರ್ ಸಾಗಿ ಯಾವುದೇ ಗಾಯಗಳಾಗದೆ ಸುರಕ್ಷಿತವಾಗಿ ಬಂಪರ್ ಒಳಗಿನಿಂದ ಇಳಿದು ಹೋಗಿದೆ. ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪುತ್ತೂರಿಗೆ ವಾಪಸ್ ತೆರಳುತ್ತಿದ್ದರು. ದಾರಿ ಮಧ್ಯೆ ಬಳ್ಪ ಎಂಬಲ್ಲಿ ನಾಯಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ತಕ್ಷಣವೇ ಸುಬ್ರಹ್ಮಣ್ಯ ಅವರು ಕಾರನ್ನು ನಿಲ್ಲಿಸಿ ಸುತ್ತಮುತ್ತ ನಾಯಿಗಾಗಿ ಹುಡುಕಾಡಿದ್ದಾರೆ. ಆದರೆ ನಾಯಿ ಅಲ್ಲಿಂದ ಎಲ್ಲಿ ಹೋಗಿದೆ ಎನ್ನುವುದನ್ನು ಊಹಿಸಲೂ ಸುಬ್ರಹ್ಮಣ್ಯ ಅವರಿಗೆ ಕಷ್ಟವಾಗಿತ್ತು. ಅಲ್ಲಿಂದ ನೇರವಾಗಿ ಕಬಕದ ತನ್ನ ಮನೆಗೆ ಬಂದು ಕಾರನ್ನು ಪರಿಶೀಲಿಸಿದಾಗ ಬಂಪರ್‌ನ ಗ್ರಿಲ್ ತುಂಡಾಗಿರುವುದು ಗಮನಕ್ಕೆ ಬಂದಿತ್ತು. ತುಂಡಾದ ಗ್ರಿಲ್ ಮಧ್ಯೆ 70 ಕಿಲೋಮೀಟರ್ ಹಿಂದೆ ತನಗೆ ಡಿಕ್ಕಿಯಾದ ನಾಯಿ ಪ್ರತ್ಯಕ್ಷವಾಗಿದೆ. ನಾಯಿಯನ್ನು ಬಂಪರ್ ಒಳಗಿಂದ ತೆಗೆಯಲಾಗದ ಸ್ಥಿತಿಯಲ್ಲಿದ್ದ ಕಾರಣ ಪಕ್ಕದ ಗ್ಯಾರೇಜ್‌ಗೆ ತೆರಳಿ ನಾಯಿಯನ್ನು ಹೊರ ತೆಗೆಯಲು ವಿನಂತಿಸಿದ್ದಾರೆ. ಗ್ಯಾರೇಜ್ ಮಂದಿ ಬಂಪರ್ ಬಿಚ್ಚಿ ನಾಯಿಯನ್ನು ಸುರಕ್ಷಿತವಾಗಿ ಕಾರಿಂದ ಹೊರ ತೆಗೆದಿದ್ದಾರೆ. ಸುಮಾರು 70 ಕಿಲೊಮೀಟರ್‌ವರೆಗೆ ಕಾರಿನ ಬಂಪರ್ ಒಳಗೇ ಇದ್ದ ನಾಯಿ ಸುರಕ್ಷಿತವಾಗಿ ಹೊರಗೆ ಬಂದು ಅಪರಿಚಿತ ಸ್ಥಳವಾದ ಕಾರಣ ಕೊಂಚ ಗಲಿಬಿಲಿಗೊಂಡಿದೆ.

    Post Views: 246

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.