Facebook Twitter Instagram
    Tuesday, August 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪ್ರಾಪ್ತ ಬಾಲಕಿಯರನ್ನು ಉಳ್ಳಾಲ ಲಾಡ್ಜ್‌ಗೆ ಕರೆದೊಯ್ದ ಆರೋಪ- ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಅಪ್ರಾಪ್ತ ಬಾಲಕಿಯರನ್ನು ಉಳ್ಳಾಲ ಲಾಡ್ಜ್‌ಗೆ ಕರೆದೊಯ್ದ ಆರೋಪ- ಇಬ್ಬರ ಬಂಧನ

    August 18, 2026
    Share

    ಕಾಸರಗೋಡು : ಸ್ನ್ಯಾಪ್‌ಚಾಟ್  ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಮಾಡಿಕೊಂಡು, 14 ಹಾಗೂ 16 ವರ್ಷದ ಇಬ್ಬರು ಶಾಲಾ ಬಾಲಕಿಯರನ್ನು ಮಂಗಳೂರು ಸಮೀಪದ ಉಳ್ಳಾಲದ ಲಾಡ್ಜ್‌ಗೆ ಕರೆದೊಯ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ.

    ಮಂಜೇಶ್ವರ ಮೂಲದ ರಿಜ್ವಾನ್ (23) ಹಾಗೂ ಮುಹಮ್ಮದ್ ಸಾದ್ (19) ಬಂಧಿತ ಆರೋಪಿಗಳು. ಇವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ – POCSO) ಕಾಯ್ದೆಯ ಸೆಕ್ಷನ್ 3 ಮತ್ತು 4 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೊಸದುರ್ಗ ಪೊಲೀಸ್ ಇನ್ಸ್‌ಪೆಕ್ಟರ್ ಮಾಹಿತಿಯಂತೆ, ಘಟನೆ ನಡೆಯುವ ಮೂರು ದಿನಗಳಷ್ಟೇ ಮುಂಚೆ ಬಾಲಕಿಯರಿಗೆ ಸ್ನ್ಯಾಪ್‌ಚಾಟ್‌ನಲ್ಲಿ ಆರೋಪಿಗಳ ಪರಿಚಯವಾಗಿತ್ತು. ಆಗಸ್ಟ್ 16 ರ ಭಾನುವಾರ ಇಬ್ಬರು ಆರೋಪಿಗಳು ಕಾರಿನಲ್ಲಿ ಕಾಂಞಂಗಾಡ್‌ಗೆ ಬಂದು, ಮನೆ ಸಮೀಪದಿಂದಲೇ ಬಾಲಕಿಯರನ್ನು ಕರೆದುಕೊಂಡು ಹೋಗಿದ್ದರು. ಬಾಲಕಿಯರು ತಮ್ಮ ಸ್ನೇಹಿತರನ್ನು ಭೇಟಿಯಾಗಲು ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದರು.

    ಸಂಜೆಯಾದರೂ ಬಾಲಕಿಯರು ಮನೆಗೆ ಹಿಂತಿರುಗದಿದ್ದಾಗ ಆತಂಕಗೊಂಡ ಪೋಷಕರು ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕಿಯರ ಮೊಬೈಲ್ ಫೋನ್ ಟವರ್ ಲೊಕೇಶನ್ ಆಧರಿಸಿ ತನಿಖೆ ನಡೆಸಿದಾಗ, ಅವರು ಕರ್ನಾಟಕ-ಕೇರಳ ಗಡಿ ಭಾಗದ ಉಳ್ಳಾಲಕ್ಕೆ ತೆರಳಿರುವುದು ಪತ್ತೆಯಾಗಿದೆ.
    ಉಳ್ಳಾಲದ ಲಾಡ್ಜ್‌ಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಬಾಲಕಿಯರು ನೀಡಿರುವ ಹೇಳಿಕೆಯನ್ನಾಧರಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

    Post Views: 5

    Related Posts

    ಉಡುಪಿ: ಅಮೆಜಾನ್ ಡೆಲಿವರಿ ಹಬ್ ಪ್ರಾಂಚಸಿ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ

    August 18, 2026

    ಬಂಟರ ಸಂಘ – ಗ್ರಾಮ ಸಮಿತಿ ಉಜಿರೆ ಇವರ ನೇತೃತ್ವದಲ್ಲಿ “ಆಟಿಡೊಂಜಿ ದಿನ “

    August 18, 2026

    ಬೆಳ್ತಂಗಡಿ: ಕೇರೆ ಹಾವನ್ನು ಬೆನ್ನಟ್ಟಿ ಮನೆಯೊಳಗೆ ನುಗ್ಗಿದ ಬೃಹತ್ ಕಾಳಿಂಗ ಸರ್ಪ

    August 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಅಮೆಜಾನ್ ಡೆಲಿವರಿ ಹಬ್ ಪ್ರಾಂಚಸಿ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ

    August 18, 2026

    ಅಪ್ರಾಪ್ತ ಬಾಲಕಿಯರನ್ನು ಉಳ್ಳಾಲ ಲಾಡ್ಜ್‌ಗೆ ಕರೆದೊಯ್ದ ಆರೋಪ- ಇಬ್ಬರ ಬಂಧನ

    August 18, 2026

    ಬಂಟರ ಸಂಘ – ಗ್ರಾಮ ಸಮಿತಿ ಉಜಿರೆ ಇವರ ನೇತೃತ್ವದಲ್ಲಿ “ಆಟಿಡೊಂಜಿ ದಿನ “

    August 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.