Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ, ಅಪಾರ ಪ್ರಮಾಣದ ಅಕ್ರಮ ಸಂಪತ್ತು ಪತ್ತೆ
    ಇತ್ತೀಚಿನ ಸುದ್ದಿ

    ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ, ಅಪಾರ ಪ್ರಮಾಣದ ಅಕ್ರಮ ಸಂಪತ್ತು ಪತ್ತೆ

    August 17, 2023
    Share

    ಬೆಂಗಳೂರು: ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಬೀದರ್​ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದು ಅಪಾರ ಪ್ರಮಾಣದಲ್ಲಿ ಅಕ್ರಮ ಸಂಪತ್ತು ಪತ್ತೆ ಹಚ್ಚಲಾಗಿದೆ ಎನ್ನಲಾಗಿದೆ.

    ಚಿತ್ರದುರ್ಗದ ಹೊಳಲ್ಕೆರೆ ಸಣ್ಣ ನೀರಾವರಿ‌ ಇಲಾಖೆ ಇಂಜಿನಿಯರ್ ಕೆ.ಮಹೇಶ್, ಪತ್ನಿ BBMP ಎಇ ಹೆಚ್.ಭಾರತಿ ಮನೆ ಮೇಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

    ದಾವಣಗೆರೆಯ ಜಯನಗರದಲ್ಲಿರುವ ಮಹೇಶ್​​ ಮನೆ ಮೇಲೂ ದಾ ನಡೆಸಲಾಗಿದೆ. ಇದಲ್ಲದೇ ಬೀದರ್​ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಟೀಚರ್ ಕಾಲೋನಿಯ ಕಾನ್ಸ್​ಟೇಬಲ್​ ವಿಜಯಕುಮಾರ್ ಮನೆ ಮೇಲೂ ದಾಳಿ ಮಾಡಲಾಗಿದೆ. ಧಾರವಾಡದ ನಗರದ ಸಪ್ತಾಪುರ ಬಡಾವಣೆಯ ಮಿಚಿಗನ್ ಲೇಔಟ್​​ನಲ್ಲಿರುವ ಸಂತೋಷ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ.

    ಕೊಡಗು ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಮನೆ ಮೇಲೆ ದಾಳಿ ನಡೆಸಿದ್ದಾರೆ.ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತದ ಬಳಿ ಇರುವ ಮನೆಯಲ್ಲಿ ಚಿನ್ನ, ನಗದು ಪತ್ತೆ. ಪ್ರಿಯಾಪಟ್ಟಣ ತಾಲೂಕಿನ ಮಾಕನಳ್ಳಿಯ ಮಾವನ ಮನೆ ಹಾಗೂ ಮೈಸೂರು ನಲ್ಲಿರುವ ಭಾವ ಮೈದನ ಮನೆಯಲ್ಲೂ ಅಧಿಕಾರಿಗಳು ಶೋಧಕಾರ್ಯ ನಡೆಸಿದ್ದಾರೆ.

    ಕೊಪ್ಪಳದಲ್ಲು ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ರೆಡ್ ನಡೆಸಲಾಗಿದೆ. ಮಂಜುನಾಥ್ ಬನ್ನಿ ಕೊಪ್ಪಗೆ ಸೇರಿದ ನಿವಾಸ ಕಚೇರಿಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ.ಕೊಪ್ಪಳ ನಗರದ ಮಂಗಳ ಆಸ್ಪತ್ರೆ ಹಿಂಭಾಗದ ಮನೆ ನಿರ್ಮಿತಿ ಕೇಂದ್ರ, ಹೊಲಗೆ ಗ್ರಾಮದಲ್ಲಿನ ಲಾಡ್ಜ್ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲೆ ನಡೆಸುತ್ತಿದ್ದಾರೆ. ರಾಯಚೂರು ಲೋಕಾಯುಕ್ತ ಎಸ್ ಪಿ ಆರ್ ಎಲ್ ಅರಸಿದ್ದಿ ನೇತೃತ್ವದಲ್ಲಿ ನಡೆಸುತ್ತಿದ್ದಾರೆ. ಚೆನ್ನಗಿರಿ ಅರಣ್ಯ ಇಲಾಖೆ ಆರ್‌ಎಫ್‌ಓ ಸತೀಶ್ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಶಿವಮೊಗ್ಗದಲ್ಲಿರುವ ಸತೀಶ್ ಮನೆ ಮೇಲು ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಚನ್ನಗಿರಿ ಅರಣ್ಯ ಇಲಾಖೆಯ ಕ್ವಾರ್ಟರ್ಸ್ ಮನೆ ಮೇಲೂ ಅಧಿಕಾರಿಗಳು ದಾಳಿ ಮಾಡಿದ್ದಾರೆ.

    Post Views: 215

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.