Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಜ್ಪೆ: ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ..!
    ಇತ್ತೀಚಿನ ಸುದ್ದಿ

    ಬಜ್ಪೆ: ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ..!

    April 20, 2024
    Share

    ಬಜ್ಪೆ: ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ಗುದ್ದಿ ಬಳಿಕ ಸರಣಿಯಾಗಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಎಡಪದವು ಪೇಟೆಯಲ್ಲಿ ನಡೆದಿದೆ. ಎಡಪದವು ರಾಮಮಂದಿರ ಬಳಿ ಮಣ್ಣಿನ ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತವಾಗಿದ್ದು, ಮಂಗಳೂರು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿ ಈ ಘಟನೆ ಸಂಭವಿಸಿದೆ.ಲಾರಿ ನಿಲ್ಲಿಸಲು ಆಗದೆ ಚಾಲಕ, ಸುಮಾರು 500 ಮೀಟರ್ ದೂರದ ವರೆಗೂ ಲಾರಿಯನ್ನು ನಿಯಂತ್ರಿಸುವ ಪ್ರಯತ್ನ ಮಾಡಿದ್ದಾನೆ. ಆದರೆ,ರಸ್ತೆಯಲ್ಲಿ ಸರಣಿ ಅಪಘಾತ ನಡೆದಿದ್ದು, ಮೊದಲಿಗೆ ಎದುರಿಗೆ ಸಿಕ್ಕ ಸ್ವಿಫ್ಟ್ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸಂಪೂರ್ಣ ಕಾರು‌ ಜಖಂಗೊಂಡಿದ್ದು, ಕಾರಿನಲ್ಲಿದ್ದವರಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಳಿಕ ಮುಂದೆ ಚಲಿಸಿದ ಲಾರಿ, ಎಣ್ಣೆ ಪೂರೈಕೆ ಮಾಡುತ್ತಿದ್ದ ಪಿಕ್ಅಫ್ ವಾಹನಕ್ಕೆ ಡಿಕ್ಕಿಯಾಗಿದ್ದು, ರಸ್ತೆಗೆ ಪಿಕ್ ಅಪ್ ಉರುಳಿ ಬಿದ್ದ ಕಾರಣ ಎಣ್ಣೆ ಪ್ಯಾಕೆಟ್​ಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದಿವೆ. ನಂತರ ಎದುರಿನಿಂದ ಬಂದ ಟ್ಯಾಂಕರ್​ವೊಂದು, ಲಾರಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದರೆ, ಬಳಿಕ ಎಡಪದವು ಪೇಟೆಯ ಬಳಿ ಖಾಸಗಿ ಬಸ್​ಗೆ​ ಡಿಕ್ಕಿ ಹೊಡೆದು ಲಾರಿ ನಿಂತಿದೆ.

    ಮೂಡಬಿದ್ರೆಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಸರಣಿ ಅಪಘಾತದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ನಾಲ್ಕು ದ್ವಿಚಕ್ರ ವಾಹನಗಳು ಹಾಗೂ ಮೂರು ಅಂಗಡಿಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಬಜ್ಪೆ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ

    Post Views: 188

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.