ಉಳ್ಳಾಲ: ದ್ವಿಚಕ್ರ ವಾಹನವೊಂದಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಸಂಕೋಲಿಗೆ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ದೇರಳಕಟ್ಟೆ ಸಮೀಪದ ಪನೀರ್ ನಿವಾಸಿ ಅಝರ್ ಎಂದು ಗುರುತಿಸಲಾಗಿದೆ.
ಅಝರ್ ಸ್ಕೂಟರ್ ನಲ್ಲಿ ಬರುತ್ತಿದ್ದಾಗ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಈ ಸಂದರ್ಭ ರಸ್ತೆಗೆ ಎಸೆಯಲ್ಪಟ್ಟ ಅವರ ಮೇಲೆ ಲಾರಿ ಚಲಿಸಿದೆ ಎಂದು ತಿಳಿದು ಬಂದಿದೆ. ಅವರ ಮೃತದೇಹವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂಬ ಮಾಹಿತಿ ಸ್ಥಳೀಯರಿಂದ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.