Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚೈತ್ರಾ ಹೆಬ್ಬಾರ್ ನಾಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್: ಲವ್ ಜಿಹಾದ್ ಶಂಕೆ..!
    ಇತ್ತೀಚಿನ ಸುದ್ದಿ

    ಚೈತ್ರಾ ಹೆಬ್ಬಾರ್ ನಾಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್: ಲವ್ ಜಿಹಾದ್ ಶಂಕೆ..!

    February 24, 2024
    Share

    ಪುತ್ತೂರು: ದೇರಳಕಟ್ಟೆಯ ಖಾಸಗಿ ಯುನಿರ್ವಸಿಟಿಯಲ್ಲಿ ಪಿಹೆಚ್‌ಡಿ ಮಾಡುತ್ತಿದ್ದ ಪುತ್ತೂರಿನ ಚೈತ್ರಾ ನಾಪತ್ತೆಯಾಗಿರುವ ಬಗ್ಗೆ ಫೆ. 17 ರಂದು ಉಳ್ಳಾಲ ಠಾಣೆಗೆ ದೂರು ನೀಡಲಾಗಿದ್ದು, ಇದೀಗ ಆಕೆಯ ನಾಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

    ದೇರಳಕಟ್ಟೆಯ ಖಾಸಗಿ ವಿವಿಯಲ್ಲಿ ಪಿಹೆಚ್‌ಡಿ ಮಾಡಲು ಅನುಕೂಲವಾಗಲು ಮಾಡೂರಿನಲ್ಲಿ ಪಿಜಿ ಒಂದರಲ್ಲಿದ್ದ ಚೈತ್ರಾ ಅನ್ಯ ಕೋಮಿನ ಯುವಕನ ಜೊತೆ ಸಂಪರ್ಕದಲ್ಲಿ ಇದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪುತ್ತೂರಿನ ಅನ್ಯ ಕೋಮಿನ ಯುವಕನೊಬ್ಬ ಪಿಜಿಗೆ ಭೇಟಿ ನೀಡುತ್ತಿದ್ದ ಎಂಬ ಬಗ್ಗೆ ಮಾಡೂರಿನ ಬಜರಂಗದಳದ ಮುಖಂಡರು ಚೈತ್ರಾ ದೊಡ್ಡಪ್ಪನ ಗಮನಕ್ಕೆ ತಂದಿದ್ದರು. ಡ್ರಗ್‌ ಮಾಫೀಯಾ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದ ಬಜರಂಗದಳದ ಮುಖಂಡರು ಈ ಬಗ್ಗೆ ಎಚ್ಚರ ವಹಿಸುವಂತೆ ಚೈತ್ರಾ ದೊಡ್ಡಪ್ಪನ ಬಳಿ ಹೇಳಿದ್ದರು. ಇದಾದ ಬಳಿಕ ಚೈತ್ರಾ ನಾಪತ್ತೆಯಾಗಿದ್ದು, ಆಕೆ ಪುತ್ತೂರಿನ ಶಾರೂಕ್ ಶೇಖ್‌ ಎಂಬಾತನ ಜೊತೆ ಹೋಗಿರುವ ಬಲವಾದ ಅನುಮಾನ ಮೂಡಿದೆ. ಪುತ್ತೂರಿನ ಕೂರ್ನಡ್ಕದ ಚಿಕ್ಕಮ್ಮನ ಮನೆಯಲ್ಲಿ ವಾಸವಿದ್ದ ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ಶಾರೂಕ್‌ ಶೇಖ್‌ ಗೆ ಚೈತ್ರಾ ಪುತ್ತೂರಿನಲ್ಲೇ ಪರಿಚಿತಳಾಗಿರುವ ಸಾದ್ಯತೆ ಇದೆ. ಪುರುಷರಕಟ್ಟೆ ಹಾಗೂ ಕೂರ್ನಡ್ಕ ಸಮೀಪದ ಪ್ರದೇಶವಾಗಿದ್ದು, ಇಲ್ಲೇ ಇಬ್ಬರಿಗೂ ಪರಿಚಯವಾಗಿತ್ತು ಎಂದು ಅನುಮಾನ ವ್ಯಕ್ತವಾಗಿದೆ.ಐಟಿಟಿ ಕಲಿತಿದ್ದ ಶಾರೂಕ್‌ ಶೇಖ್ ಈ ಹಿಂದೆ ವಿದೇಶದಲ್ಲಿ ಕೆಲಸ ಮಾಡಿದ್ದು ಕತಾರ್ ಜೈಲಿನಲ್ಲಿ ಒಂದು ವರ್ಷ ಶಿಕ್ಷೆ ಅನುಭವಿಸಿದ್ದ ಎಂದು ತಿಳಿದು ಬಂದಿದೆ. ಚೈತ್ರಾ ಹೆಬ್ಬಾರ್‌ಗೆ ಗಾಂಜಾದ ರುಚಿ ತೋರಿಸಿದ್ದ ಶಾರೂಕ್‌ ಶೇಖ್‌ ಆಕೆಯನ್ನು ಬುಟ್ಟಿಗೆ ಹಾಕಿಕೊಂಡಿರುವ ಅನುಮಾನ ಇದೆ. ಪಿಜಿಯಿಂದ ತೆರಳಿದ್ದ ಚೈತ್ರಾ ಹೆಬ್ಬಾರ್ ಸುರತ್ಕಲ್ ಎಟಿಎಂ ಒಂದರಿಂದ ಹಣ ಡ್ರಾ ಮಾಡಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಚೈತ್ರಾ ಅಕೌಂಟ್‌ನಲ್ಲಿ ಲಕ್ಷಾಂತರ ರೂಪಾಯಿ ಹಣ ಇರುವ ಬಗ್ಗೆಯೂ ಮಾಹಿತಿ ಕಲೆ ಹಾಕಿದ ಪೊಲೀಸರು ಅಕೌಂಟ್ ಬ್ಲಾಕ್ ಮಾಡಿಸಿದ್ದಾರೆ. ಇದೊಂದು ಲವ್ ಜಿಹಾದ್ ಪ್ರಕರಣವೆಂದು ಆರೋಪಿಸಿರುವ ಬಜರಂಗದಳ ಚೈತ್ರಾಳನ್ನು ಎರಡು ದಿನದಲ್ಲಿ ಪತ್ತೆ ಹಚ್ಚಲು ಪೊಲೀಸರಿಗೆ ಗಡುವು ನೀಡಿದೆ.

    Post Views: 260

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.