ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರು ದಿನಾಂಕ 31-12-2023ರ ಒಳಗೆ ತಮ್ಮ ಅಡುಗೆ ಅನಿಲ ಗ್ರಾಹಕರ ಸಂಖ್ಯೆಗೆ ಇ-ಕೆವೈಸಿಯನ್ನು ಮತ್ತು ಬ್ಯಾಂಕ್ ಖಾತೆ ಮಾಹಿತಿಯನ್ನು ಗ್ಯಾಸ್ ಏಜೆನ್ಸಿಯಲ್ಲಿ ಸಲ್ಲಿಸಬೇಕು. ತಪ್ಪಿದ್ದಲ್ಲಿ ಅಂತಹ ಗ್ರಾಹಕರಿಗೆ ಸಹಾಯಧನ ನಿಲ್ಲಿಸಲಾಗುತ್ತದೆ.
ಗೃಹ ಬಳಕೆ ಅಡುಗೆ ಅನಿಲ ವಾಣಿಜ್ಯ ಬಳಕೆಯಾಗಿ ಪರಿವರ್ತನೆಯಾಗುತ್ತದೆ ಮತ್ತು ಅನಿಲ ಸಂಪರ್ಕ ಕಡಿತವಾಗುತ್ತದೆ ಹಾಗೂ ಇ-ಕೆವೈಸಿ ಕಾರ್ಯಕ್ಕೆ ಹಣ ನೀಡಬೇಕೆಂಬ ವದಂತಿ ಸಾರ್ವಜನಿಕರ ವಲಯದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿರುತ್ತದೆ.
ಅಡುಗೆ ಅನಿಲ ಗ್ರಾಹಕರಿಗೆ ತಿಳಿಯಪಡಿಸುವುದೇನೆಂದರೆ ಈ ವಿಷಯಗಳು ಕೇವಲ ವದಂತಿಯಾಗಿದ್ದು, ಗ್ರಾಹಕರು ಇ-ಕೆವೈಸಿ ಮಾಡಿಸಲು ಕೇಂದ್ರ ಸರ್ಕಾರವು/ ಅನಿಲ ಕಂಪನಿಗಳು ಯಾವುದೇ ಕೊನೆಯ ದಿನಾಂಕವನ್ನು ನಿಗಧಿಪಡಿಸಿರುವುದಿಲ್ಲ ಹಾಗೂ ಇ-ಕೆವೈಸಿ ಮಾಡಿಸುವುದಕ್ಕೆ ಯಾವುದೇ ಶುಲ್ಕ ನಿಗಧಿಯಾಗಿರುವುದಿಲ್ಲ. ಇಕೆವೈಸಿ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿರುತ್ತದೆ. ಇ-ಕೆವೈಸಿ ಮಾಡಿಸುವುದು ನಿರಂತರ ಪ್ರಕ್ರಿಯೆಯಾಗಿದ್ದು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಪಡೆದಿರುವವರು ಮತ್ತು ಸಹಾಯಧನ ಪಡೆಯುವ ಗ್ರಾಹಕರು ಮಾತ್ರ ಇ-ಕೆವೈಸಿಯನ್ನು ಆದ್ಯತೆ ಮೇಲೆ ನೀಡುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.