Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್ ಕಾವಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಸೆರೆ:ಎರಡು ಪ್ರಕರಣಗಳಲ್ಲಿ ಆರೋಪಿಗೆ ಶಿಕ್ಷೆ
    ಇತ್ತೀಚಿನ ಸುದ್ದಿ

    ಪೊಲೀಸ್ ಕಾವಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಸೆರೆ:ಎರಡು ಪ್ರಕರಣಗಳಲ್ಲಿ ಆರೋಪಿಗೆ ಶಿಕ್ಷೆ

    June 6, 2026
    Share

    ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆಗಳ್ಳತನ ಹಾಗೂ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದ ಎರಡು ಪ್ರತ್ಯೇಕ ಗಂಭೀರ ಪ್ರಕರಣಗಳ ವಿಚಾರಣೆ ನಡೆಸಿದ ಇಲ್ಲಿನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ (SCJ & JMFC) ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಸುಳ್ಯದ ಅಜ್ಜಾವರ ನಿವಾಸಿ ಎ.ಎಂ. ಅಜೀಜ್ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ.ಅಪರಾಧಿ ಎ.ಎಂ. ಅಜೀಜ್ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ 2006ರಲ್ಲಿ ರಾತ್ರಿ ವೇಳೆ ಮನೆಗನ್ನ ಹಾಕಿ ಕಳ್ಳತನ ನಡೆಸಿದ ಆರೋಪದಡಿ ಅಪರಾಧ ಕ್ರಮಾಂಕ (ಅ.ಕ್ರ) 96/2006, ಐಪಿಸಿ ಕಲಂ 457 ಮತ್ತು 380 ರಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದರೊಂದಿಗೆ, 2018ರಲ್ಲಿ ಈತ ಕಾನೂನುಬದ್ಧ ಪೊಲೀಸ್ ಕಾವಲಿನಿಂದ ತಪ್ಪಿಸಿಕೊಂಡು ಓಡಿಹೋದ ಆರೋಪದ ಮೇಲೆ ಸುಳ್ಯ ಠಾಣೆಯಲ್ಲೇ ಮತ್ತೊಂದು ಪ್ರಕರಣ ಅ.ಕ್ರ 103/2018, ಐಪಿಸಿ ಕಲಂ 224 ರ ಅಡಿಯಲ್ಲಿ ದಾಖಲಾಗಿತ್ತು. ಪೊಲೀಸರು ಈ ಎರಡೂ ಪ್ರಕರಣಗಳ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.ಈ ಎರಡು ಪ್ರಕರಣಗಳ ಸುದೀರ್ಘ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಶ್ರೀಮತಿ ದಮಯಂತಿಯವರು, ಆರೋಪಿಯ ಮೇಲಿನ ಎಲ್ಲಾ ಡಿಜಿಟಲ್ ಹಾಗೂ ಸಾಂದರ್ಭಿಕ ಸಾಕ್ಷ್ಯಗಳು ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದಾರೆ ಪೊಲೀಸ್ ಕಾವಲಿನಿಂದ ತಪ್ಪಿಸಿಕೊಂಡ ಪ್ರಕರಣ (ಅ.ಕ್ರ: 103/2018): ಐಪಿಸಿ ಕಲಂ 224ರ ಅಡಿಯಲ್ಲಿ ಆರೋಪಿಗೆ 1 ವರ್ಷದ ಸಾದಾ ಜೈಲು ಶಿಕ್ಷೆ ಹಾಗೂ ₹5,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ತಪ್ಪಿದ್ದಲ್ಲಿ ಹೆಚ್ಚುವರಿಯಾಗಿ 45 ದಿನಗಳ ಕಾಲ ಸಾದಾ ಕಾರಾಗೃಹ ವಾಸ ಅನುಭವಿಸಬೇಕಾಗುತ್ತದೆ.ಮನೆಗಳ್ಳತನ ಪ್ರಕರಣ (ಅ.ಕ್ರ: 96/2006): ಈ ಪ್ರಕರಣದ ಐಪಿಸಿ ಕಲಂ 457ರ ಅಡಿಯಲ್ಲಿ 3 ವರ್ಷಗಳ ಸಾದಾ ಜೈಲು ಶಿಕ್ಷೆ ಮತ್ತು ₹5,000 ದಂಡ (ದಂಡ ಕಟ್ಟದಿದ್ದರೆ 45 ದಿನ ಹೆಚ್ಚುವರಿ ಜೈಲು) ಹಾಗೂ ಕಲಂ 380ರ ಅಡಿಯಲ್ಲಿ ಮತ್ತೊಂದು 3 ವರ್ಷಗಳ ಸಾದಾ ಜೈಲು ಶಿಕ್ಷೆ ಮತ್ತು ₹5,000 ದಂಡ ವಿಧಿಸಿ ಮಾನ್ಯ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

    Post Views: 90

    karnataka PoliceInvestigation

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.