Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜಕೀಯ»ಮಹಾರಾಷ್ಟ್ರ ವಿಧಾನಸಭೆಯ ನೂತನ ಸ್ಪೀಕರ್ ಆಗಿ ರಾಹುಲ್ ನಾರ್ವೇಕರ್ ಆಯ್ಕೆ!
    ರಾಜಕೀಯ

    ಮಹಾರಾಷ್ಟ್ರ ವಿಧಾನಸಭೆಯ ನೂತನ ಸ್ಪೀಕರ್ ಆಗಿ ರಾಹುಲ್ ನಾರ್ವೇಕರ್ ಆಯ್ಕೆ!

    July 3, 2022
    Share

    ಮುಂಬೈ: ಮಹಾರಾಷ್ಟ್ರದ ನೂತನ ಸರ್ಕಾರಕ್ಕೆ ವಿಶ್ವಾಸಮತ ಯಾಚನೆಗೆ ಇನ್ನೂ ಒಂದು ದಿನ ಬಾಕಿ ಇರುವಾಗಲೇ ವಿಧಾನಸಭೆ ಸ್ಪೀಕರ್‌ ಆಯ್ಕೆ ನಡೆದಿದೆ. ರಾಹುಲ್ ನಾರ್ವೇಕರ್ ಅವರನ್ನು ನೂತನ ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿದೆ.

    ಕೊಲಾಬಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ರಾಹುಲ್ ನಾರ್ವೇಕರ್ ಅವರ ಹೆಸರನ್ನು ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಬಿಜೆಪಿಯ ಚಂದ್ರಕಾಂತ್ ಪಾಟೀಲ್ ಅವರು ನಾಮ ನಿರ್ದೇಶನ ಮಾಡಿದರು. ಬಳಿಕ ನಡೆದ ಚುನಾವಣೆಯಲ್ಲಿ 164 ಮತ ಪಡೆದು ನಾರ್ವೇಕರ್‍ ಸ್ಪೀಕರ್ ಹುದ್ದೆಗೇರಿದರು. ಶಿವಸೇನೆಯ ರಾಜನ್ ಸಾಲ್ವಿ 107 ಮತಗಳೊಂದಿಗೆ ಪರಾಭವಗೊಂಡರು. ಕೈ ಎತ್ತುವ ಮೂಲಕ ಚುನಾವಣೆ ನಡೆಸಲಾಯಿತು.

    2021ರ ಫೆಬ್ರವರಿಯಲ್ಲಿ ಕಾಂಗ್ರೆಸ್‌ನ ನಾನಾ ಪಟೋಲ್ ಸ್ಪೀಕರ್‌ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ತೆರವಾಗಿದ್ದ ಹುದ್ದೆಗೆ ಈಗ ಆಯ್ಕೆ ನಡೆದಿದ್ದು, ಡೆಪ್ಯುಟಿ ಸ್ಪೀಕರ್ ನರಹರಿ ಜೀರವಾಲ್ ಅವರು ಅಧಿಕಾರ ಹಸ್ತಾಂತರಿಸಿದರು. ರಾಜಕೀಯಕ್ಕೆ ಬರುವುದಕ್ಕೂ ಮುನ್ನ ಶಿವಸೇನೆಯ ಯುವ ಘಟಕದಲ್ಲಿ ವಕ್ತಾರರಾಗಿ ಕೆಲಸ ಮಾಡಿದ ಅನುಭವ ನಾರ್ವೇಕರ್‍ ಅವರಿಗಿದೆ. 2014ರಲ್ಲಿ ಶಿವಸೇನೆ ತೊರೆದು ಎನ್‌ಸಿಪಿ ಸೇರಿದ್ದರು. ಬಳಿಕ 2019ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

    ಬಿಜೆಪಿ ಬೆಂಬಲದೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಏಕನಾಥ ಶಿಂಧೆ ಅವರು ಸೋಮವಾರ ಬಹುಮತ ಸಾಬೀತುಪಡಿಸಲು ವಿಶ್ವಾಸಮತಯಾಚನೆ ಮಾಡಬೇಕು. ಇದಕ್ಕೂ ಮುನ್ನವೇ ಸ್ಪೀಕರ್‍ ಆಯ್ಕೆ ನಡೆದಿದ್ದು, ನೂತನ ಸ್ಪೀಕರ್ ಅವರೇ ವಿಶ್ವಾಸಮತಯಾಚನೆ ನಡೆಸಿಕೊಡಲಿದ್ದಾರೆ ಎನ್ನಲಾಗಿದೆ.

    Post Views: 392

    Related Posts

    ಚಲಿಸುತ್ತಿದ್ದ ಬೈಕ್‌ನಲ್ಲೇ ಮದ್ಯಪಾನ; ವೈರಲ್ ವಿಡಿಯೊ ಬೆನ್ನಲ್ಲೇ ಸವಾರ ಅರೆಸ್ಟ್

    July 16, 2026

     ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ : ಶಿಕ್ಷಕಿಯರು, ಅಡುಗೆ ಸಹಾಯಕಿ ಸೇರಿ ನಾಲ್ವರ ವಿರುದ್ಧ ‘FIR’ ದಾಖಲು!

    July 11, 2026

    ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ: ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿ ನಾಪತ್ತೆ

    July 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.