Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ರಹಿತ ವಾರಂಟ್
    ಇತ್ತೀಚಿನ ಸುದ್ದಿ

    ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ರಹಿತ ವಾರಂಟ್

    December 30, 2025
    Share

    ಬೆಳ್ತಂಗಡಿ: ಖಾಸಗಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ್ದ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ನಿರಂತರ ಗೈರುಹಾಜರಾಗಿರುವ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

    ಇಂದಬೆಟ್ಟುವಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಜಾತಿಯ ಬಗ್ಗೆ ದ್ವೇಷ ಭಾಷಣ ಮಾಡಿದ ವಿಚಾರವಾಗಿ ಬೆಳ್ತಂಗಡಿ ಠಾಣೆಯಲ್ಲಿ ಕಿಶೋ‌ರ್ ಕುಮಾರ್ ಎಂಬವರು ದಾಖಲಿಸಿದ್ದ ದೂರಿನಂತೆ ಪ್ರಕರಣ ದಾಖಲಿಸಲಾಗಿತ್ತು. ಬೆಳ್ತಂಗಡಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು ಪ್ರಕರಣದ ವಿಚಾರಣೆ ನಡೆಯುತ್ತಿದೆ. ವಿಚಾರಣೆಗೆ ಪದೇ ಪದೇ ನ್ಯಾಯಾಲಯಕ್ಕೆ ಗೈರಾಗುತ್ತಿರುವ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಗೆ ಡಿ.24ರಂದು ಬೆಳ್ತಂಗಡಿ ನ್ಯಾಯಾಲಯ ಬಂಧನದ ವಾರಂಟ್ ಜಾರಿ ಮಾಡಿದೆ.

    ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಪುತ್ತೂರು ಎ.ಸಿ. ಆದೇಶ ಹೊರಡಿಸಿದ್ದರು. ಇದೀಗ ಅವರ ವಿರುದ್ಧ ಮತ್ತೆ ವಾರೆಂಟ್ ಜಾರಿಯಾಗಿದೆ.

    Post Views: 173

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.