Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಿವೃತ್ತಿಗೆ 3 ದಿನ ಬಾಕಿ ಇರುವಾಗಲೇ ಐಪಿಎಸ್ ಅಧಿಕಾರಿ ಮಹಿಪಾಲ್ ನಿಧನ
    ಇತ್ತೀಚಿನ ಸುದ್ದಿ

    ನಿವೃತ್ತಿಗೆ 3 ದಿನ ಬಾಕಿ ಇರುವಾಗಲೇ ಐಪಿಎಸ್ ಅಧಿಕಾರಿ ಮಹಿಪಾಲ್ ನಿಧನ

    August 28, 2025
    Share

    ನಿವೃತ್ತಿಗೆ ಮೂರು ದಿನ ಬಾಕಿ ಇರುವಾಗಲೇ ಐಪಿಎಸ್ ಅಧಿಕಾರಿಯೊಬ್ಬರು ಮೃತಪಟ್ಟ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ.  1997ನೇ ಬ್ಯಾಚ್ ನ ಐಪಿಎಸ್ ಅಧಿಕಾರಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮಹಿಪಾಲ್ ಯಾದವ್ ಮೃತಪಟ್ಟ ದುರ್ದೈವಿ.

    ಆಗಸ್ಟ್ 30ರಂದು ಕೇರಳ ರಾಜ್ಯ ಸರಕಾರವು ಆನ್‌ಲೈನ್ ನಲ್ಲಿ ಅಧಿಕೃತ ವಿದಾಯ ಕಾರ್ಯಕ್ರಮ ಏರ್ಪಡಿಸುವುದಕ್ಕೂ ಮುನ್ನವೇ ಮಹಿಪಾಲ್ ಯಾದವ್ ನಿಧನರಾಗಿದ್ದಾರೆ. ಅವರು ರಾಜಸ್ಥಾನದ ಜೈಪುರದಲ್ಲಿ ನಿಧನರಾಗಿದ್ದು, ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿ ವಿಷಮಿಸಿದ್ದರಿಂದ, ಅವರ ಕುಟುಂಬದ ಸದಸ್ಯರು ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕೊಂಡೊಯ್ದಿದ್ದರು. 

    ತಮ್ಮ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕಕ್ಕೆ ಭಾಜನರಾಗಿದ್ದ ಮಹಿಪಾಲ್ ಯಾದವ್, ಕೇರಳ ಅಬಕಾರಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಅವರು ವೈದ್ಯಕೀಯ ರಜೆಯ ಮೇಲೆ ಕರ್ತವ್ಯದಿಂದ ತೆರಳುವುದಕ್ಕೂ ಮುನ್ನ, ಅವರನ್ನು ಇತ್ತೀಚೆಗಷ್ಟೇ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಿಸಲಾಗಿತ್ತು.   ರಾಜಸ್ಥಾನದ ಅಲ್ವಾರ್ ನ ನಿವಾಸಿಯಾದ ಮಹಿಪಾಲ್ ಯಾದವ್, ನಿಯೋಜನೆಯ ಮೇಲೆ ಗಡಿ ಭದ್ರತಾ ಪಡೆ ಹಾಗೂ ಕೇಂದ್ರೀಯ ತನಿಖಾ ತಂಡ (CBI) ಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಅವರು ಸಿಬಿಐನಲ್ಲಿದ್ದಾಗ, ಅತಿ ಗಣ್ಯ ವ್ಯಕ್ತಿಗಳ ಆಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣ ಹಾಗೂ ಮುಲಾಯಂ ಸಿಂಗ್ ಯಾದವ್ ಅವರ ಆಸ್ತಿ ತನಿಖೆ ಪ್ರಕರಣಗಳ ತಂಡದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. 2018ರಲ್ಲಿ ಅವರು ಜಲಂಧರ್ ನ ಬಿಎಸ್ಎಫ್ ಪಂಜಾಬ್ ಫ್ರಾಂಟಿಯರ್ ನ ಪೊಲೀಸ್ ಮುಖ್ಯಿಸ್ಥರಾಗಿ ಕಾರ್ಯನಿರ್ವಹಿಸಿದ್ದರು. 2023ರಲ್ಲಿ ಮತ್ತೆ ಮಾತೃ ಕೇಡರ್ ಗೆ ಮರಳಿದ್ದ ಮಹಿಪಾಲ್ ಯಾದವ್, ಕೇರಳ ಅಬಕಾರಿ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಕೇರಳದಲ್ಲಿ ಅವರು ಕೊಚ್ಚಿ ನಗರ ಪೊಲೀಸ್ ಆಯುಕ್ತ, ಆಂತರಿಕ ಭದ್ರತೆಗೆ ಪೊಲೀಸ್ ಮಹಾ ನಿರೀಕ್ಷಕ ಹಾಗೂ ತಿರುವನಂತಪುರಂ ವಲಯದ ಪೊಲೀಸ್ ಮಹಾನಿರೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು.

    Post Views: 172

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.