Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕನ್ನಡಿಗ ʻಮಲ್ಲಿಕಾರ್ಜುನ ಖರ್ಗೆʼ
    ಇತ್ತೀಚಿನ ಸುದ್ದಿ

    ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕನ್ನಡಿಗ ʻಮಲ್ಲಿಕಾರ್ಜುನ ಖರ್ಗೆʼ

    October 26, 2022
    Share

    ನವದೆಹಲಿ: ಕನ್ನಡಿಗ ʻಮಲ್ಲಿಕಾರ್ಜುನ ಖರ್ಗೆʼ(Mallikarjun Kharge)ಅವರು ಇಂದು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ.

    ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕೇಂದ್ರ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಸಮಾರಂಭದಲ್ಲಿ ಸೋನಿಯಾ ಗಾಂಧಿ ಅವರು ಚುನಾವಣಾ ಪ್ರಮಾಣಪತ್ರವನ್ನು ಹಸ್ತಾಂತರಿಸಿದ್ದಾರೆ.

    24 ವರ್ಷಗಳ ನಂತ್ರ ಮೊದಲ ಬಾರಿಗೆ ಗಾಂಧಿಯೇತರರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಬಾರಿ ಗಾಂಧಿ ಕುಟುಂಬದವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆಯಿಂದ ಹೊರಗುಳಿಸಿದ್ದಾರೆ.

    ಅಧಿಕಾರ ವಹಿಸಿಕೊಳ್ಳುವ ಮುನ್ನ ಖರ್ಗೆ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಅವರ ನಿವಾಸಕ್ಕೆ ಭೇಟಿ ಮಾಡಿ ನೀಡಿದ್ದರು. ನಂತ್ರ, ಇಂದು ಬೆಳಗ್ಗೆ ಖರ್ಗೆ ಅವರು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು ಮತ್ತು ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ, ಮಾಜಿ ಉಪ ಪ್ರಧಾನಿ ಜಗಜೀವನ್ ರಾಮ್ ಅವರ ಸ್ಮಾರಕಗಳಿಗೂ ಭೇಟಿ ನೀಡಿ ನಮನ ಸಲ್ಲಿಸಿದರು.

    Post Views: 253

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.