Facebook Twitter Instagram
    Tuesday, August 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಮಲ್ಪೆ ದಕ್ಕೆಯಲ್ಲಿ ಮೀನುಗಾರ ಕಾರ್ಮಿಕನ ಕೊಲೆ-ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ: ಮಲ್ಪೆ ದಕ್ಕೆಯಲ್ಲಿ ಮೀನುಗಾರ ಕಾರ್ಮಿಕನ ಕೊಲೆ-ಆರೋಪಿಯ ಬಂಧನ

    August 25, 2026
    Share

    ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ಮೀನುಗಾರ ಕಾರ್ಮಿಕನನ್ನು ಕೊಲೆಗೈದ ಆರೋಪಿಯನ್ನು ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

    ಆ.24ರಂದು ರಾತ್ರಿ ಬೋಟ್‌ನಲ್ಲಿ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಆ.25ರಂದು ಬೆಳಗಿನ ಜಾವ ಗೋವಿಂದ, ಅಭಿಷೇಕ್‌ನನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
    ಘಟನೆಯ ಮಾಹಿತಿ ದೊರೆತ ತಕ್ಷಣ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ (ಕಾ&ಸು) ಅನಿಲ್ ಕುಮಾರ್ ಡಿ. ಅವರು ಸಿಬ್ಬಂದಿಗಳಾದ ಹೆಡ್ ಕಾನ್‌ಸ್ಟೆಬಲ್ ಆದರ್ಶ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಕುಬೇರ ಅವರೊಂದಿಗೆ ಆರೋಪಿ ಪತ್ತೆಗೆ ಕಾರ್ಯಾಚರಣೆ ಕೈಗೊಂಡರು.

    ಆರೋಪಿ ಗೋವಿಂದ ಉಡುಪಿಗೆ ತೆರಳಿ, ಅಲ್ಲಿಂದ ಹೈದರಾಬಾದ್ ಅಥವಾ ಮುಂಬೈ ಕಡೆಗೆ ರೈಲಿನಲ್ಲಿ ಪರಾರಿಯಾಗಲು ಮುಂದಾಗಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದುಕೊಂಡ ಪೊಲೀಸರು ರೈಲು ನಿಲ್ದಾಣದ ಬಳಿ ಆತನನ್ನು ತಕ್ಷಣ ವಶಕ್ಕೆ ಪಡೆದಿದ್ದಾರೆ.
    ವಿಚಾರಣೆಯಲ್ಲಿ ಗೋವಿಂದ ಕಳೆದ ಸುಮಾರು 15 ವರ್ಷಗಳಿಂದ ಮನೆಗೆ ಹೋಗದೆ ಮುಂಬೈ, ಹೈದರಾಬಾದ್ ಸೇರಿದಂತೆ ವಿವಿಧೆಡೆಗಳಲ್ಲಿ ಕೆಲಸ ಮಾಡಿಕೊಂಡು ವಾಸಿಸುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ.
    ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 92/2026, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 103ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗೋವಿಂದನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

    Post Views: 16

    Related Posts

    ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಯುಪಿಸಿಎಲ್ ಗುತ್ತಿಗೆ ಕೈತಪ್ಪಿದಕ್ಕಾಗಿ ಕಿಶೋ‌ರ್ ಪೂಜಾರಿಯಿಂದ ಸುಪಾರಿ -ಎಸ್ಪಿ ಹರಿರಾಮ್

    August 25, 2026

    ಮಂಗಳೂರು: ಗೋವಾದಿಂದ ಕೇರಳಕ್ಕೆ ಅಕ್ರಮ ಮದ್ಯ ಸಾಗಣೆ ಜಾಲ ಪತ್ತೆ- ಇಬ್ಬರು ಅರೆಸ್ಟ್

    August 25, 2026

    ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನ ಕೊಲೆ- ಸಹ ಕಾರ್ಮಿಕ ಪೊಲೀಸ್ ವಶಕ್ಕೆ

    August 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಯುಪಿಸಿಎಲ್ ಗುತ್ತಿಗೆ ಕೈತಪ್ಪಿದಕ್ಕಾಗಿ ಕಿಶೋ‌ರ್ ಪೂಜಾರಿಯಿಂದ ಸುಪಾರಿ -ಎಸ್ಪಿ ಹರಿರಾಮ್

    August 25, 2026

    ಮಂಗಳೂರು: ಗೋವಾದಿಂದ ಕೇರಳಕ್ಕೆ ಅಕ್ರಮ ಮದ್ಯ ಸಾಗಣೆ ಜಾಲ ಪತ್ತೆ- ಇಬ್ಬರು ಅರೆಸ್ಟ್

    August 25, 2026

    ಉಡುಪಿ: ಮಲ್ಪೆ ದಕ್ಕೆಯಲ್ಲಿ ಮೀನುಗಾರ ಕಾರ್ಮಿಕನ ಕೊಲೆ-ಆರೋಪಿಯ ಬಂಧನ

    August 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.