Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ದರ್ಶನ್​ಗೆ ಸೇರಿದ್ದೆನ್ನಲಾದ ಫಾರ್ಮ್ ಹೌಸ್‌ನಲ್ಲಿ ಮತ್ತೊಬ್ಬ ಮ್ಯಾನೇಜರ್ ಶವವಾಗಿ ಪತ್ತೆ
    ಕರಾವಳಿ ಸುದ್ದಿ

    ದರ್ಶನ್​ಗೆ ಸೇರಿದ್ದೆನ್ನಲಾದ ಫಾರ್ಮ್ ಹೌಸ್‌ನಲ್ಲಿ ಮತ್ತೊಬ್ಬ ಮ್ಯಾನೇಜರ್ ಶವವಾಗಿ ಪತ್ತೆ

    June 18, 2024
    Share

    ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ರೇಣುಕಸ್ವಾಮಿ ಎನ್ನುವ ವ್ಯಕ್ತಿಯೊರ್ವ ಅಶ್ಲೀಲ ಸಂದೇಶ ಕಳಿಸಿದ್ದಾನೆ ಎಂದು ಹತ್ಯೆ ಮಾಡಿದ ಆರೋಪ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಮೇಲಿದೆ. ಸದ್ಯ ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ. ಆದರೆ ಈ ಪ್ರಕರಣದ ಬೆನ್ನಲ್ಲೆ ದರ್ಶನ್​ ಅವರ ಸುತ್ತ ಮತ್ತೊಂದು ಪ್ರಕರಣವು ಸುತ್ತಿಕೊಂಡಿದೆ ಎನ್ನಲಾಗಿದೆ.

    ನಟ ದರ್ಶನ್ ಅವರಿಗೆ ಸೇರಿದ್ದೆನ್ನಲಾದ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ದರ್ಶನ್​ರ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ, ದರ್ಶನ್​ರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಶ್ರೀಧರ್ ಎಂಬುವರು ಏಪ್ರಿಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಮೃತ ಮ್ಯಾನೇಜರ್ ಶ್ರೀಧರ್ ಆಗಿದ್ದಾರೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಮ್ಯಾನೇಜರ್ ಶ್ರೀಧರ್ ಆತ್ಮಹತ್ಯೆಗೆ ಶರಣಾಗಿದ್ದ. ಬಗ್ಗನದೊಡ್ಡಿಯಲ್ಲಿನ ದುರ್ಗ ಫಾರ್ಮ್ ಹೌಸ್‌ನಲ್ಲಿ ಶ್ರೀಧರ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದನು. ಆತ, ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದನು. ಇನ್ನು ಶ್ರೀಧರ್ ಮೃತ ದೇಹವನ್ನು ನೋಡಿದ್ದ ಆತನ ಶ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದನು. ಈ ವಿಷಯ ಇದೀಗ ಮಹತ್ವ ಪಡೆದುಕೊಂಡಿದ್ದು, ಆತ್ಮಹತ್ಯೆ ಪ್ರಕರಣದ ಮರು ತನಿಖೆ ನಡೆಯುವ ಸಾಧ್ಯತೆ ಇದೆ. ಆನೇಕಲ್ ತಾಲ್ಲೂಕಿನ ಬಗ್ಗನದೊಡ್ಡಿಯಲ್ಲಿ ನಡೆದಿದ್ದ ಘಟನೆ ನಡೆದಿದೆ.

    ಪೊಲೀಸರು ಸ್ಥಳ ಭೇಟಿ ಮಾಡಿ ಪರಿಶೀಲನೆ ಮಾಡಿದಾಗ ಮ್ಯಾನೇಜರ್ ಶ್ರೀಧರ್ ಫಾರ್ಮ್ ಹೌಸ್ ಪಕ್ಕದಲ್ಲಿ ರಕ್ತಕಾರಿ ಮೃತಪಟ್ಟಿದ್ದನು. ಒಂದು ವರ್ಷಗಳ ಕಾಲ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ ಶ್ರೀಧರ್, ಫಾರ್ಮ್‌ಹೌಸ್ ಪಕ್ಕದ ಕಲ್ಲು ಬಂಡೆ ಮೇಲೆ ಅನಾಥವಾಗಿ ಶವವಾಗಿ ಪತ್ತೆಯಾಗಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ, ಒಂಟಿತನ ಕಾಡುತ್ತಿದೆ ಎಂದು ಡೆತ್ ಬರೆದಿಟ್ಟು ಸ್ಯೂಸೈಡ್ ಮಾಡಿಕೊಂಡಿದ್ದಾರೆ. ಈ ಘಟನೆಯ ಬೆನ್ನಲ್ಲಿ ಆನೇಕಲ್ ಪೊಲೀಸ್ ಠಾಣೆಯಲ್ಲಿ UDR ದಾಖಲು ಮಾಡಿಕೊಂಡಿದ್ದಾರೆ.

    ಯಾವುದೋ ಕಾರಣದಿಂದ ನನ್ನ ಪರ್ಸನಲ್ ಒಂಟಿತನ ಕಾಡುತ್ತಿದೆ. ಬದುಕುವ ಆಸೆಯಿಲ್ಲ, ನನ್ನ ಸಾವಿಗೆ ನಾನೇ ಕಾರಣ. ನನ್ನ ಸಾವಿನ ಕಾರಣ ಹಾಗೂ ಹಿನ್ನೆಲೆಯನ್ನು ಇಟ್ಟುಕೊಂಡು ಸ್ನೇಹಿತರು, ಕುಟುಂಬ ಸದಸ್ಯರು ಸೇರಿದಂತೆ ಯಾರೊಬ್ಬರಿಗೂ ತೊಂದರೆ ಕೊಡಬೇಡಿ. ನಾನು ಯಾರಿಗೆ ಫೋನ್ ಮಾಡಿದ್ದೆ, ಅದು ಇದು ಎಂದು ಯಾರಿಗೂ ಪೊಲೀಸರು ತೊಂದರೆ ಕೊಡಬೇಡಿ. ನಮ್ಮ ಮನೆಯಲ್ಲಿ ಅಪ್ಪ, ಅಮ್ಮ, ಸಹೋದರಿಯರು ಸೇರಿ ಎಲ್ಲರಿಗೂ ಹೇಳುತ್ತಿದ್ದೇನೆ, ನನ್ನ ಸಾವಿಗೆ ನಾನೇ ಕಾರಣ ಎಂದು ಹೇಳಿದ್ದಾರೆ. ಒಟ್ಟಾರೆ, ಮ್ಯಾನೇಜರ್ ಶ್ರೀಧರ್ ಸಾಯುವ ಮುನ್ನ ಮಾಡಿದ 1 ನಿಮಿಷದ ವಿಡಿಯೋದಲ್ಲಿ ನನ್ನ ಸಾವಿಗೆ ನಾನೇ ಕಾರಣ ಎನ್ನುವುದನ್ನು 10ಕ್ಕೂ ಹೆಚ್ಚು ಮಾಡಿ ಹೇಳಿಕೊಂಡಿದ್ದಾನೆ.

    ಡೆತ್ ನೋಟ್ ಅನ್ನು ಸ್ವತಃ ತಾನೇ ಬರೆದಿಟ್ಟಿರುವ ಮ್ಯಾನೇಜರ್ ಶ್ರೀಧರ್ ಡೆತ್ ನೋಟ್ ಮೇಲೆ ಸಹಿ ಹಾಕುವುದು ಬಿಟ್ಟು ಹೆಬ್ಬೆಟ್ಟು ಒತ್ತಿದ್ದಾನೆ. ಇದು ಅನುಮಾನಕ್ಕೆ ಕಾರಣವಾಗಿದೆ. ಜೊತೆಗೆ, ಸಾಯುವ ಮುನ್ನ ಸೆಲ್ಫಿ ವಿಡಿಯೋವೊಂದನ್ನು ಕೂಡ ಮಾಡಿದ್ದಾನೆ.

    ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಅವರ ಹಳೆಯ ಪ್ರಕರಣಗಳನ್ನು ಸಹ ಪೊಲೀಸರು ಜಾಲಾಡುತ್ತಿದ್ದು, ಶ್ರೀಧರ್ ಆತ್ಮಹತ್ಯೆ ಪ್ರಕರಣದ ಮರು ತನಿಖೆ ನಡೆಯುವ ಸಂಭವ ಇದೆ.

    ಡೆತ್ ನೋಟ್ ನಲ್ಲಿ ಸಾವಿಗೆ ಯಾರು ಕಾರಣ ಅಲ್ಲ, ಒಂಟಿತನದಿಂದ ಬೇಸರಗೊಂಡು ಸಾಯುತ್ತಿದ್ದೇನೆ, ಯಾರಿಗೂ ತೊಂದರೆ ಕೊಡಬೇಡಿ ಎಂದು ಬರೆದಿತ್ತು. ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯಲ್ಲಿ ವಿಷ ಸೇವಿಸಿರುವುದಾಗಿ ಬಂದಿತ್ತು. ಕೆಲವು ಬಾಡಿ ಪಾರ್ಟ್​ಗಳನ್ನು ಕಳಿಸಿದ್ದೆವು, ಅದರ ವರದಿ ಇನ್ನೂ ಬಂದಿಲ್ಲ. ಫಾರಂ ಹೌಸ್​ನ ಇನ್ನೂ ಕೆಲವರ ವಿಚಾರಣೆ ಮಾಡಿ ಹೇಳಿಕೆ ಪಡೆಯಬೇಕಿದೆ’ ಎಂದು ಬೆಂಗಳೂರು ಗ್ರಾಮಾಂತರ ಎಸ್​ಪಿ ಮಲ್ಲಿಕಾರ್ಜುನ, ಹೇಳಿದ್ದಾರೆ.

    Post Views: 316

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.