Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಚೆಕ್ ಅಮಾನ್ಯ ಪ್ರಕರಣ – ಆರೋಪಿಗೆ ದಂಡ ವಿಧಿಸಿದ ನ್ಯಾಯಾಲಯ
    ಇತ್ತೀಚಿನ ಸುದ್ದಿ

    ಮಂಗಳೂರು: ಚೆಕ್ ಅಮಾನ್ಯ ಪ್ರಕರಣ – ಆರೋಪಿಗೆ ದಂಡ ವಿಧಿಸಿದ ನ್ಯಾಯಾಲಯ

    October 10, 2024
    Share

    ಮಂಗಳೂರು: ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪುದು ಗ್ರಾಮದ ಹಸನಬ್ಬ ಎಂಬಾತನಿಗೆ ಬಂಟ್ವಾಳದ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಭಾಗ್ಯಮ್ಮ ದಂಡ ಪಾವತಿಸುವಂತೆ ತೀರ್ಪು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಫರಂಗಿಪೇಟೆ ಶಾಖೆಯಿಂದ ಹಸನಬ್ಬ 2012ರಲ್ಲಿ ಅಡವು ಸಾಲ ಪಡೆದುಕೊಂಡಿದ್ದರು. ಆರೋಪಿ ಸರಿಯಾದ ಸಮಯಕ್ಕೆ ಮರುಪಾವತಿಸದೆ ಸಾಲವನ್ನು ಸುಸ್ತಿ ಮಾಡಿದ್ದರು. ಹಾಗಾಗಿ ಆರೋಪಿ ವಿರುದ್ಧ ಸಹಕಾರಿ ಕಾಯ್ದೆಯನ್ವಯ ಕಾನೂನು ಪ್ರಕ್ರಿಯೆ ಆರಂಭಿಸಿತ್ತು. 2019ರಲ್ಲಿ ಆಸ್ತಿಯನ್ನು ಹರಾಜಿಗಿಡುವ ಸಂದರ್ಭ ಆರೋಪಿಯು ಶಾಖೆಗೆ ಆಗಮಿಸಿ ಸಾಲದ ಭಾಗಶಃ ಬಾಕಿಗೆ ಚೆಕ್ ನೀಡಿದ್ದರು. ಇದು ಅಮಾನ್ಯಗೊಂಡ ಕಾರಣ ಎಸ್‌ಸಿಡಿಸಿಸಿ ಬ್ಯಾಂಕ್ ನ್ಯಾಯಾಲಯದ ಮೆಟ್ಟಿಲೇರಿತ್ತು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆರೋಪಿ ಹಸನಬ್ಬ ಬ್ಯಾಂಕಿಗೆ 2.50 ಲಕ್ಷ ರೂ. ಪರಿಹಾರ ನೀಡಬೇಕು, 10,000 ರೂ. ದಂಡ ಪಾವತಿಸಬೇಕು. ತಪ್ಪಿದ್ದಲ್ಲಿ 1 ವರ್ಷದ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿದರು. ಎಸ್‌ಸಿಡಿಸಿಸಿ ಬ್ಯಾಂಕ್ ಪರ ವಕೀಲ ಸುಕೇಶ್ ಕುಮಾರ್ ಶೆಟ್ಟಿ ವಾದ ಮಂಡಿಸಿದ್ದರು.

    Post Views: 232

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.