ಮಂಗಳೂರು:ಮಂಗಳೂರು ಮಹಾನಗರ ಪಾಲಿಕೆಯ 23ನೇ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪಮೇಯರ್ ಆಗಿ ಪೂರ್ಣಿಮ ಆಯ್ಕೆಯಾಗಿದ್ದಾರೆ.
ಮೇಯರ್,ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಮಹತ್ವದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದೆ. ಮೇಯರ್ ಮತ್ತೆ ಸಾಮಾನ್ಯ ಅಭ್ಯರ್ಥಿಗೆ ಹಾಗೂ ಉಪ ಮೇಯರ್ ಸ್ಥಾನವು ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿತ್ತು.ಪಾಲಿಕೆಯ ಒಟ್ಟು 60 ಸ್ಥಾನಗಳ ಪೈಕಿ ಬಿಜೆಪಿ 44 ಸ್ಥಾನಗಳನ್ನು ಗೆದ್ದುಕೊಂಡಿತ್ತು.
ಮೊದಲ ಅವಧಿಯಲ್ಲಿ ಬಿಜೆಪಿಯ ದಿವಾಕರ್ ಪಾಂಡೇಶ್ವರ ಮೇಯರ್ ಗದ್ದುಗೆಗೇರಿದರೆ,ಎರಡನೇ ಅವಧಿಗೆ ಸಾಮಾನ್ಯ ಮೀಸಲು ನಿಗದಿಯಾದ ಕಾರಣ ಯಾವುದೇ ಜಿದ್ದಾಜಿದ್ದಿ ಇಲ್ಲದೆ ಹಿರಿಯ ಸದಸ್ಯ ಪ್ರೇಮಾನಂದ ಶೆಟ್ಟಿಗೆ ಮೇಯರ್ ಹುದ್ದೆ ಒಲಿದು ಬಂದಿತ್ತು. ಅಭ್ಯರ್ಥಿ ಆಯ್ಕೆಗಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ , ಇಬ್ಬರು ಶಾಸಕರ ನೇತೃತ್ವದಲ್ಲಿ ಪಾಲಿಕೆ ಬಿಜೆಪಿ ಸದಸ್ಯರ ಜತೆಗೆ ಮಹತ್ವದ ಸಭೆ ನಡೆಸಿ ವಿವಿಧ ಮುಖಂಡರು ತೀವ್ರ ಚರ್ಚೆ ನಡೆಸಿದ್ದರು.