Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಳಲಿ ಮಸೀದಿ ವಿವಾದ: ಆ. 1ರಂದು ಮಂಗಳೂರು ನ್ಯಾಯಾಲಯದ ತೀರ್ಪು
    ಇತ್ತೀಚಿನ ಸುದ್ದಿ

    ಮಳಲಿ ಮಸೀದಿ ವಿವಾದ: ಆ. 1ರಂದು ಮಂಗಳೂರು ನ್ಯಾಯಾಲಯದ ತೀರ್ಪು

    July 23, 2022
    Share

    ಮಂಗಳೂರು: ಮಂಗಳೂರು ಹೊರವಲಯದ ಮಳಲಿ ಪೇಟೆ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯ ಆ. 1ರಂದು ಆದೇಶ ನೀಡಲಿದೆ.

    ಮಸೀದಿ ಕಟ್ಟಡದಲ್ಲಿ ದೇವಸ್ಥಾನ ಹೋಲುವ ರಚನೆ ಕಂಡುಬಂದಿದ್ದ ಹಿನ್ನೆಲೆಯಲ್ಲಿ ಕೋರ್ಟ್‌ ಕಮಿಷನರ್‌ ಮೂಲಕ ಸಮೀಕ್ಷೆ ನಡೆಸುವಂತೆ ಹಿಂದೂ ಸಂಘಟನೆ ಪರ ವಕೀಲರು ಮನವಿ ಮಾಡಿದ್ದರು.

    ಇದಕ್ಕೆ ಮಸೀದಿ ಪರ ವಕೀಲರು ಆಕ್ಷೇಪಿಸಿದ್ದರು. ವಕ್ಫ್ ಬೋರ್ಡ್‌ ಅಧೀನದಲ್ಲಿ ಇರುವುದರಿಂದ ಸರ್ವೇ ನಡೆಸಲು ಅವಕಾಶ ನೀಡದೆ ನವೀಕರಣ ಕಾಮಗಾರಿ ಮುಂದುವರಿಸಲು ಅವಕಾಶ ನೀಡಬೇಕು ಎಂದು ವಾದ ಮಂಡಿಸಿದ್ದರು.

    ಸಿವಿಲ್‌ ನ್ಯಾಯಾಲಯ ತೀರ್ಪು ಪ್ರಕಟಿಸದಂತೆ ಸ್ಥಳೀಯರಾದ ಮನೋಜ್‌ ಕುಮಾರ್‌, ಧನಂಜಯ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್‌ ವಜಾಗೊಳಿಸಿದ್ದ ಆದೇಶದ ಪ್ರತಿಯನ್ನು ಮಸೀದಿ ಪರ ವಕೀಲರು ಸಿವಿಲ್‌ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಆದೇಶದ ಪ್ರತಿ ಸ್ವೀಕರಿಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯವು ತೀರ್ಪನ್ನು ಆ. 1ಕ್ಕೆ ನಿಗದಿಗೊಳಿಸಿದೆ.

    Post Views: 178

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.