Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜನವರಿ 19, 20 ಮತ್ತು 21 ರಂದು ಮೂರು ದಿನಗಳ ಕಾಲ ಮಂಗಳೂರು ಲಿಟ್‌ ಫೆಸ್ಟ್‌ನ ಆರನೇ ಆವೃತ್ತಿ
    ಇತ್ತೀಚಿನ ಸುದ್ದಿ

    ಜನವರಿ 19, 20 ಮತ್ತು 21 ರಂದು ಮೂರು ದಿನಗಳ ಕಾಲ ಮಂಗಳೂರು ಲಿಟ್‌ ಫೆಸ್ಟ್‌ನ ಆರನೇ ಆವೃತ್ತಿ

    January 17, 2024
    Share

    ಮಂಗಳೂರು : ಜನವರಿ 19, 20 ಮತ್ತು 21 ರಂದು ಮೂರು ದಿನಗಳ ಕಾಲ ಮಂಗಳೂರಿನ ಟಿಎಂಎ ಪೈ ಇಂಟರ್‌ನ್ಯಾಷನಲ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಮಂಗಳೂರು ಲಿಟ್‌ ಫೆಸ್ಟ್‌ನ ಆರನೇ ಆವೃತ್ತಿಯು ಜರುಗಲಿದೆ.

    ಒಟ್ಟು 29 ಅವಧಿಗಳನ್ನು ಪ್ರಸ್ತುತ ಉತ್ಸವವು ಹೊಂದಿದೆ. ಎರಡು ವೇದಿಕೆಗಳು ಮತ್ತು ಹರಟೆ ಕಟ್ಟೆ ಇವುಗಳಲ್ಲಿ 60 ಕ್ಕೂ ಅಧಿಕ ಸಾಹಿತಿಗಳು, ವಾಗ್ಮಿಗಳು ಭಾಗವಹಿಸಲಿದ್ದಾರೆ.

    ಈ ಬಾರಿಯ ʼThe Idea of Bharath’ ಪ್ರಶಸ್ತಿಗೆ ʼವನಿತಾ ಸೇವಾ ಸಮಾಜʼ, ಧಾರವಾಡ ಈ ಸಂಸ್ಥೆಯನ್ನು ಆಯ್ಕೆ ಮಾಡಲಾಗಿದೆ.

    19 ರಂದು ಸಂಜೆ 5 ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಪಾತ್ರರಾದ ಲಕ್ಷ್ಮೀಶ ತೋಳ್ಪಾಡಿ, ಹೆಸರಾಂತ ಕಲಾವಿದೆ ರಾಧೆ ಜಗ್ಗಿ, ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಸಂಸ್ಥೆ (ಐಸಿಎಸ್ಎಸ್ಆರ್) ಸದಸ್ಯ ಕಾರ್ಯದರ್ಶಿ ಡಾ. ಧನಂಜಯ ಸಿಂಗ್, ರಕ್ಷಣಾ ಸಚಿವರ ಸಲಹೆಗಾರ ಲೆ. ಜ. ವಿನೋದ ಖಂಡಾರೆ, ನಿಟ್ಟೆ ವಿಶ್ವವಿದ್ಯಾಲಯದ ಡಾ. ವಿನಯ್‌ ಹೆಗ್ಡೆ, ಮಿಥಿಕ್‌ ಸೊಸೈಟಿಯ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

    ಹೆಸರಾಂತ ಭರತನಾಟ್ಯ ಕಲಾವಿದೆ ರಾಧೆ ಜಗ್ಗಿ (19 ಸಾಯಂಕಾಲ) ಮತ್ತು ಶಾಸ್ತ್ರೀಯ ಸಂಗೀತ ಕಲಾವಿದರಾದ ಸಂದೀಪ್‌ ನಾರಾಯಣ್‌ (20 ಸಾಯಂಕಾಲ) ಕಾರ್ಯಕ್ರಮ ನಡೆಯಲಿದೆ. ಸಿನಿಮಾ ಪ್ರದರ್ಶನ, ಮಕ್ಕಳ ಸಾಹಿತ್ಯ ಅಭಿರುಚಿ ಮತ್ತು ಕಥೆಯ ಬಗ್ಗೆ ಪಾಲಕರಿಗೆ ಆಸಕ್ತಿ ಬೆಳೆಸುವ ದೃಷ್ಟಿಯಿಂದ ಕಾರ್ಕಳದ ವಂದನಾ ರೈ ಅವರಿಂದ ಮಕ್ಕಳಿಗಾಗಿ ʼಚಿಣ್ಣರ ಅಂಗಳʼ ನಡೆಯಲಿದೆ. ಪುಸ್ತಕ ಮಳಿಗೆ, ತುಳು ಅಕ್ಷರ ಕಲಿಕಾ ಕಾರ್ಯಾಗಾರ, ಕ್ಲೇ ಮಾಡಲಿಂಗ್‌, ದೇಶೀ ಆಟಗಳು ಸೇರಿದಂತೆ ಲೇಖಕರು ಮತ್ತು ಪ್ರಮುಖರೊಂದಿಗೆ ಸಂವಾದ – (ಹರಟೆ ಕಟ್ಟೆ) ಈ ಬಾರಿಯ ಲಿಟ್ ಫೆಸ್ಟ್‌ನ ವಿಶೇಷತೆಯಾಗಿದೆ.

    ಸಾಹಿತ್ಯ ಲೋಕದ ಮೂರು ಸಾಧಕರು, ಕುವೆಂಪು, ಬೇಂದ್ರೆ ಮತ್ತು ಪಂಜೆ ಮಂಗೇಶರಾಯರ ಕುರಿತು ವಿಶೇಷ ಅವಧಿಗಳು ಜರುಗಲಿವೆ.

    ವಾಗ್ಮಿಗಳು, ಸಾಹಿತಿಗಳು, ಸಂಶೋಧಕರು, ವಿಷಯ ಪರಿಣಿತರು ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಇರಲಿದ್ದಾರೆ.

    ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮಗಳ ವಿವರಗಳನ್ನು ಈ ಲಿಂಕ್‌ನಲ್ಲಿ ನೋಡಬಹುದು – https://mlrlitfest.org/event-schedule-2024/

    Post Views: 273

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.